ಚಿಕ್ಕಮಗಳೂರು:ಮರಕ್ಕೆ ಕಾರು ಡಿಕ್ಕಿಯಾಗಿ ದಂಪತಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಶ್ವೇತಾ ಹಾಗೂ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಈ ದುರ್ಘಟನೆ ನಡೆದಿದೆ.
ತರೀಕೆರೆ ತಾಲೂಕಿನ ಬೆಟ್ಟದ ತಾವರೆಕೆರೆ ಗ್ರಾಮದ ಸಮೀಪ ಕಾರು ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮುಂಭಾಗದಲ್ಲಿ ಕುಳಿತಿದ್ದ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಿಂಭಾಗದಲ್ಲಿ ಇಬ್ಬರು ಮಕ್ಕಳು ಕುಳಿತಿದ್ದು, ಅವರಿಗೂ ಗಂಭೀರ ಗಾಯಗಳಾಗಿವೆ.
ಗಾಯಗೊಂಡ ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಪಟ್ಟವರನ್ನು ಬೆಂಗಳೂರು ಮೂಲದ ಶ್ವೇತಾ ಹಾಗೂ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ನಿಶ್ಚಿತಾರ್ಥ ಕಾರ್ಯಕ್ರಮವೊಂದಕ್ಕೆ ಭದ್ರಾವತಿಗೆ ಕುಟುಂಬ ಸಮೇತ ಕಾರಿನಲ್ಲಿ ತೆರಳುತ್ತಿದ್ದರು.
ಇದನ್ನು ಓದಿ:ಕೋರ್ಟ್ನಲ್ಲಿ ವಕೀಲರ ಸೋಗಿನಲ್ಲಿದ್ದ ದುಷ್ಕರ್ಮಿಯಿಂದ ಫೈರಿಂಗ್: ಮಹಿಳೆಗೆ ಗುಂಡೇಟು
ಆದರೆ, ಜವರಾಯನ ಅಟ್ಟಹಾಸ ಇಬ್ಬರನ್ನು ಬಲಿ ಪಡೆದು ಮಕ್ಕಳನ್ನು ಅನಾಥ ಮಾಡಿದೆ. ಇನ್ನು ಕಾರು ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜು ಗುಜ್ಜಾಗಿದೆ. ಹಿಂದೆ ಕುಳಿತಿದ್ದ ಮಕ್ಕಳ ಸ್ಥಿತಿಯೂ ಗಂಭೀರವಾಗಿದೆ ಎಂಬ ಮಾಹಿತಿ ದೊರೆತಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ತರೀಕೆರೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.