ಚಿಕ್ಕಮಗಳೂರು:ನಿಂತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಕಾರು ಬಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ: ಮೂವರಿಗೆ ಗಂಭೀರ ಗಾಯ - ಚಿಕ್ಕಮಗಳೂರು ಅಪಘಾತ ಸುದ್ದಿ
ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಟ್ರಾಕ್ಟರ್ಗೆ ಕಾರು ಡಿಕ್ಕಿ
ಚಿಕ್ಕಮಗಳೂರು ತಾಲೂಕಿನ ಹೊರವಲಯದ ಮೂಗ್ತಿಹಳ್ಳಿ ಬಳಿ ಈ ಘಟನೆ ನಡೆದಿದ್ದು, ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದಿದೆ. ಕಾರು ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಒಳಗೆ ಮರದ ದಿಮ್ಮಿಗಳು ಹೊಕ್ಕಿದ್ದು, ಮೂವರು ಗಂಭೀರವಾಗಿ ಗಾಯಾಗೊಂಡಿದ್ದಾರೆ.
ಗಾಯಾಳುಗಳನ್ನು ಜಿಲ್ಲಾ ಸರ್ಕಾರಿ ಆಸ್ವತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕ್ಕಮಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಕಾರಿಗೆ ಅಪಘಾತವಾಗಿದೆ. ಈ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.