ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು: 13 ಅಡಿ ಆಳದ ಕಂದಕಕ್ಕೆ ಬಿತ್ತು 10 ಜನ ಪ್ರಯಾಣಿಸುತ್ತಿದ್ದ ಕಾರು - ಚಿಕ್ಕಮಗಳೂರಲ್ಲಿ 13 ಅಡಿ ಕಂದಕಕ್ಕೆ ಬಿದ್ದ ಕಾರುc

ಚಿಕ್ಕಮಗಳೂರು ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 13 ಅಡಿ ಆಳದ ಕಂದಕ್ಕೆ ಬಿದ್ದಿತ್ತು. ಘಟನೆಯಲ್ಲಿ ಕಾರಿನಲ್ಲಿದ್ದ 10 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

13 ಅಡಿ ಕಂದಕಕ್ಕೆ ಬಿದ್ದ ಕಾರು
Car felldwown in ditch

By

Published : Jul 29, 2021, 4:11 PM IST

ಚಿಕ್ಕಮಗಳೂರು:13 ಅಡಿ ಆಳದ ಕಂದಕಕ್ಕೆ ಕಾರು ಬಿದ್ದಿದ್ದು, ಐವರು ಮಕ್ಕಳು ಸೇರಿದಂತೆ ಹತ್ತು ಜನರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಆನೇಕಲ್​ನಿಂದ ಹೊರನಾಡಿಗೆ ತೆರಳುತ್ತಿದ್ದ ವೇಳೆಯಲ್ಲಿ ಬಾಳೆಹೊನ್ನೂರು ಸಮೀಪದ ವಾಟುಕುಡಿಗೆ ಸೇತುವೆ ಕಾರು ಡಿಕ್ಕಿ ಹೊಡೆದು 13 ಅಡಿ ಆಳದ ಕಂದಕಕ್ಕೆ ಬಿದ್ದಿತ್ತು. ಘಟನೆಯಲ್ಲಿ ಕಾರಿನಲ್ಲಿದ್ದ ಮಹಿಳೆಗೆ ಪೆಟ್ಟಾಗಿದ್ದು, ಉಳಿದವರಿಗೆ ಸಣ್ಣ ಪುಟ್ಟ ಗಾಯವಾಗಿದೆ.

ಕಾರಿನಲ್ಲಿ ಐವರು ಮಕ್ಕಳು, ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರಿದ್ದರು ಎಂದು ತಿಳಿದುಬಂದಿದೆ. ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details