ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಉರುಳಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಭೂತನಕಾಡು ಬಳಿಯ ರಸ್ತೆಯ ಇಳಿಜಾರಿನಲ್ಲಿ ನಡೆದಿದೆ.
ಕಾರು ಪಲ್ಟಿ: 4 ಜನರಿಗೆ ಗಂಭೀರ ಗಾಯ - kannada news
ಕಾರೊಂದು ಪಲ್ಟಿಯಾಗಿ ಚಿಕ್ಕಮಗಳೂರು ಕಡೆಯಿಂದ ಮೂಡಿಗೆರೆ ಮೂಲಕ ಧರ್ಮಸ್ಥಳಕ್ಕೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಕಾರು ಪಲ್ಟಿ 4 ಜನರಿಗೆ ಗಂಭೀರ ಗಾಯ
ಚಿಕ್ಕಮಗಳೂರು ಕಡೆಯಿಂದ ಮೂಡಿಗೆರೆ ಮೂಲಕ ಧರ್ಮಸ್ಥಳಕ್ಕೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆಲ್ದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.