ಕರ್ನಾಟಕ

karnataka

ETV Bharat / state

ಪೊಲೀಸರ ವಿರುದ್ಧ ನಿಂದನೆ : ಗೃಹ ಸಚಿವರ ವಿರುದ್ಧ ಪ್ರಕರಣ ದಾಖಲು - ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ದೂರು

ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆಯಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ದೂರು ದಾಖಲಿಸಿದೆ..

case-filed-against-home-minister-agara-jnanendra
ಪೊಲೀಸರ ವಿರುದ್ಧ ನಿಂದನೆ: ಗೃಹ ಸಚಿವರ ವಿರುದ್ಧ ಪ್ರಕರಣ ದಾಖಲು

By

Published : Dec 4, 2021, 1:46 PM IST

ಚಿಕ್ಕಮಗಳೂರು :ಪೊಲೀಸರನ್ನು ನಾಯಿಗೆ ಹೋಲಿಸಿರುವ ಆರೋಪದ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ರೈತ ಸಂಘ ಹಾಗೂ ಹಸಿರು ಸೇನೆಯಿಂದ ದೂರು ದಾಖಲು ಮಾಡಿದ್ದು, ಗೃಹ ಸಚಿವರ ಹೇಳಿಕೆಯಿಂದ ಸಾರ್ವಜನಿಕರಿಗೆ ಪೊಲೀಸರ ಮೇಲೆ ಗೌರವ ಕಡಿಮೆಯಾಗುತ್ತದೆ. ಸಮಾಜದ ಶಾಂತಿ, ಮಕ್ಕಳು-ಮಹಿಳೆಯರ ರಕ್ಷಣೆಯಲ್ಲಿ ಪೊಲೀಸರದ್ದು ಪ್ರಮುಖ ಪಾತ್ರ.

ಹಗಲಿರುಳೆನ್ನದೇ ಪೊಲೀಸರು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುತ್ತಾರೆ. ಅಂತಹ ಪೊಲೀಸರನ್ನು ನಾಯಿಗೆ ಹೋಲಿಸಿರುವುದು ಖಂಡನೀಯ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರಿನ ಪ್ರತಿ

ರೈತ ಮುಖಂಡ ನವೀನ್ ಕುರುವಾನೆ ಎಂಬುವರಿಂದ ದೂರು ದಾಖಲು ಮಾಡಲಾಗಿದ್ದು, ಆರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ:ಕ್ಲಸ್ಟರ್‌ಗಳನ್ನು ಸರಿಯಾಗಿ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ : ಸಿಎಂ ಬೊಮ್ಮಾಯಿ

ABOUT THE AUTHOR

...view details