ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ರಂಗನಾಥ ಸ್ವಾಮಿ ಜಾತ್ರೆಯು ಕಳೆದ ಎರಡು ದಿನಗಳ ಹಿಂದೆ ನಡೆದಿತ್ತು. ಆದರೆ ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ರಥೋತ್ಸವ ನಡೆಸಿದ ಹಿನ್ನೆಲೆಯಲ್ಲಿ, ಅರ್ಚಕರು ಸೇರಿ 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಕಡೂರು ರಂಗನಾಥ ಸ್ವಾಮಿ ರಥೋತ್ಸವ : 9 ಜನರ ವಿರುದ್ಧ ಪ್ರಕರಣ ದಾಖಲು - ಚಿಕ್ಕಮಗಳೂರಿನಲ್ಲಿ ರಥೋತ್ಸವ ನಡೆಸಿದ ಒಂಬತ್ತು ಜನರ ವಿರುದ್ಧ ಪ್ರಕರಣ ದಾಖಲು
ಕಡೂರು ತಾಲೂಕಿನ ಸಖರಾಯಪಟ್ಟಣದ ರಂಗನಾಥ ಸ್ವಾಮಿ ಜಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಅರ್ಚಕರು ಸೇರಿ 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಡಿಸಿ ಆದೇಶ ಮೀರಿ ರಂಗನಾಥ ಸ್ವಾಮಿ ರಥೋತ್ಸವ
ರಥೋತ್ಸವ ನಡೆಸದಂತೆ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದರು. ಆದರೆ ಆದೇಶ ಲೆಕ್ಕಿಸದೇ ಸಾವಿರಾರು ಜನರ ಮಧ್ಯೆ ರಥೋತ್ಸವ ಆಚರಣೆ ಮಾಡಲಾಗಿತ್ತು. ಈ ಬಗ್ಗೆ ಕಂದಾಯ ನಿರೀಕ್ಷಕ ಜಿತೇಂದ್ರ ಎಂಬುವರು ದೂರು ನೀಡಿದ್ದು, ದೇಗುಲದ ಅರ್ಚಕ ಕೃಷ್ಣ ಭಟ್, ನವೀನ್, ವರುಣ್, ರೀತು, ಸಂದೀಪ್, ಸಚಿನ್, ಗಣೇಶ್, ಉಲ್ಲಾಸ್, ನಿತಿನ್ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹಿರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ