ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು: ಸರಕಳ್ಳತನ ಮಾಡುತ್ತಿದ್ದ ಆರೋಪಿಯ‌ ಬಂಧನ - ಸರ ಕಳ್ಳತನ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರದ ಬಸ್ ನಿಲ್ಡಾಣ ಹಾಗೂ ಅಜ್ಜಂಪುರದ ಅಸಂದಿ ಗ್ರಾಮದಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Theft arrest
Theft arrest

By

Published : Sep 1, 2020, 5:24 PM IST

ಚಿಕ್ಕಮಗಳೂರು:ಜಿಲ್ಲೆಯಲ್ಲಿ ಚಿನ್ನದ ಸರಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಜ್ಜಂಪುರದ ಬಸ್ ನಿಲ್ಡಾಣ ಹಾಗೂ ಅಜ್ಜಂಪುರದ ಅಸಂದಿ ಗ್ರಾಮದಲ್ಲಿ ನಡೆದಿದ್ದ ಚಿನ್ನಾಭರಣ ಕಳ್ಳತನದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮಂಜು ಬಂಧಿತ ಆರೋಪಿಯಾಗಿದ್ದಾನೆ.

ಬಂಧಿತನಿಂದ 6 ಲಕ್ಷ ರೂ. ಮೌಲ್ಯದ ಸುಮಾರು 120 ಗ್ರಾಂ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಚಿನ್ನಾಭರಣ ಕಳ್ಳತನಕ್ಕೆ ಬಳಸಿದ್ದ ಒಂದು ಬೈಕ್ ಸಹ ವಶಕ್ಕೆ ಪಡೆಯಲಾಗಿದೆ.

ಬಂಧಿತ ಆರೋಪಿಯಿಂದ ಹೆಚ್ಚಿನ ಮಾಹಿತಿಯನ್ನು ಅಜ್ಜಂಪುರ ಪೊಲೀಸರು ಕಲೆಹಾಕಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

ABOUT THE AUTHOR

...view details