ಚಿಕ್ಕಮಗಳೂರು: ಕಾಫಿನಾಡಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಚಂದ್ರದ್ರೋಣ ಪರ್ವತ ಸಾಲಿನಲ್ಲಿಯೂ ಧಾರಾಕಾರ ಮಳೆಯಾಗುತ್ತಿದೆ. ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಗುಡ್ಡಗಳು ಕುಸಿಯುತ್ತಿರುವ ಹಿನ್ನೆಲೆ, ಇಲ್ಲಿನ ಪ್ರವಾಸಿ ಸ್ಥಳಗಳಿಗೆ ಜಿಲ್ಲಾಡಳಿತ ಕೆಲ ನಿರ್ಬಂಧಗಳನ್ನು ಹೇರಿದೆ. ಪ್ರವಾಸಿಗರಿಗೆ ಕೆಲವೊಂದು ನಿರ್ಬಂಧಗಳನ್ನು ಜಿಲ್ಲಾಡಳಿತ ಇಂದಿನಿಂದ ಜಾರಿ ಮಾಡಿದೆ.
1200 ಕೆಜಿ ಮೇಲ್ಪಟ್ಟ ವಾಹನಗಳಿಗೆ ನಿಷೇಧ ಹೇರಲಾಗಿದೆ. ಬೆಳಗ್ಗೆ 6 ರಿಂದ 9 ಹಾಗೂ ಸಂಜೆ 2 ರಿಂದ 4 ಗಂಟೆವರೆಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದ್ದು, ತಲಾ 150 ವಾಹನಗಳಂತೆ ದಿನಕ್ಕೆ 300 ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಿ ಕೊಡಲಾಗುತ್ತಿದೆ.
ಚಂದ್ರದ್ರೋಣ ಪರ್ವತಕ್ಕೆ ಪ್ರವಾಸಿಗರಿಗೆ ನಿಷೇಧ : ಜಿಲ್ಲಾಡಳಿತ ಆದೇಶ ಅಧಿಕೃತ ಹೊಂ ಸ್ಟೇ, ರೆಸಾರ್ಟ್ ಮುಂಗಡವಾಗಿ ಕಾಯ್ದಿರಿಸಿದವರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಮುಳ್ಳಯ್ಯನಗಿರಿ, ದತ್ತಪೀಠ, ಝರಿ ಫಾಲ್ಸ್ ಮಾಣಿಕ್ಯಧಾರ ಪ್ರವಾಸಿ ಸ್ಥಳಗಳಿಗೆ ಹೋಗುವ ಪ್ರವಾಸಿಗರಿಗೆ ಮಾತ್ರ ನಿರ್ಬಂಧ ಹೇರಲಾಗಿದೆ. ಗುಡ್ಡ ಕುಸಿತ ಹಿನ್ನೆಲೆ, ಇಲ್ಲಿನ ಸ್ಥಳೀಯರಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಆದೇಶಿಸಿದ್ದು, ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಈ ಆದೇಶ ಅನ್ವಯ ಆಗಲಿದೆ ಎಂದು ಹೇಳಲಾಗ್ತಿದೆ.
ಇದನ್ನೂ ಓದಿ :ಕಲಬುರಗಿಯಲ್ಲಿ ಇನ್ನೆರಡು ದಿನ ಭಾರಿ ಮಳೆ ಸಾಧ್ಯತೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ