ಚಿಕ್ಕಮಗಳೂರು:ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ಅನುಮತಿ ನೀಡಿದ್ದು ಕಾರು,ಬೈಕ್, ಆ್ಯಂಬುಲೆನ್ಸ್, ಮಿನಿ ಬಸ್ ಸೇರಿದಂತೆ ಲಘುವಾಹನಗಳ ಸಂಚಾರಕ್ಕೆ ಆದೇಶ ನೀಡಲಾಗಿದೆ.
ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅನುಮತಿ.. - charmadi ghat news
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಇಂದು ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ನೀಡಿ ಆದೇಶ ಹೊರಡಿಸಿದೆ.
ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ
ಇಂದು ಬೆಳಗ್ಗೆ 6 ಗಂಟೆಯಿಂದ ಸಂಚಾರ ಆರಂಭವಾಗಿದ್ದು, ಬೆಳಗ್ಗೆ 6 ರಿಂದ ಸಂಜೆ 6ರ ವರೆಗೂ ಸಂಚಾರಕ್ಕೆ ಅವಕಾಶ ನೀಡಿ ಆದೇಶ ಹೊರಡಿಸಲಾಗಿದೆ. ಸಾರಿಗೆ ಸಂಸ್ಥೆಯ ಬಸ್ ಸೇರಿದಂತೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಸೆಪ್ಟೆಂಬರ್ 14ರವರೆಗೂ ಭಾರಿ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ನಿಷೇಧ ಹೇರಿತ್ತು. ಈಗ ಅದೇ ನಿಷೇಧ ಮುಂದುವರಿಯಲಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಈ ಆದೇಶ ಹೊರಡಿಸಿದ್ದಾರೆ. ಇಂದು ಸಂಚಾರಕ್ಕೆ ಅವಕಾಶ ನೀಡಿದ್ದರಿಂದ ವಾಹನ ಸವಾರರಿಗೆ ಸಹಜವಾಗಿಯೇ ಅನುಕೂಲವಾಗಲಿದೆ.