ಚಿಕ್ಕಮಗಳೂರು:ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿರುವ ಚಾರ್ಮಾಡಿ ಘಾಟ್ನ ರಸ್ತೆ ಸಂಚಾರ ಮತ್ತೆ ಆರಂಭವಾಗಿದೆ. ವಾಹನ ಸಂಚಾರಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ಅನುಮತಿ ನೀಡಿದ್ದು ಕಾರು, ಬೈಕ್, ಆಂಬುಲೆನ್ಸ್, ಮಿನಿ ಬಸ್ ಸೇರಿದಂತೆ ಸಣ್ಣ ವಾಹನಗಳ ಸಂಚಾರಕ್ಕೆ ಮಾತ್ರ ಆದೇಶ ನೀಡಲಾಗಿದೆ.
ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಮತ್ತೆ ಆರಂಭ - mudigere Charmudi Ghat
ಮೂಡಿಗೆರೆ ತಾಲೂಕಿನಲ್ಲಿರುವ ಚಾರ್ಮಾಡಿ ಘಾಟ್ನ ರಸ್ತೆ ಸಂಚಾರ ಆರಂಭವಾಗಿದೆ. ವಾಹನ ಸಂಚಾರಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ಅನುಮತಿ ನೀಡಿದ್ದು ಕಾರು,ಬೈಕ್, ಆಂಬುಲೆನ್ಸ್, ಮಿನಿ ಬಸ್ ಸೇರಿದಂತೆ ಸಣ್ಣ ವಾಹನಗಳ ಸಂಚಾರಕ್ಕೆ ಮಾತ್ರ ಆದೇಶ ನೀಡಲಾಗಿದೆ.
ಚಾರ್ಮುಡಿ ಘಾಟ್ ಮತ್ತೆ ರಸ್ತೆ ಸಂಚಾರ ಆರಂಭ
ಬೆಳಗ್ಗೆ 6ರಿಂದ ಸಂಜೆ 7ರವರೆಗೂ ಸಂಚಾರಕ್ಕೆ ಆದೇಶ ಹೊರಡಿಸಲಾಗಿದೆ. ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದ್ದು ಆಗಸ್ಟ್ 9ರಿಂದ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ನಿಷೇಧ ಹೇರಿತ್ತು. ಪ್ರಯಾಣಿಕರ ಅನುಕೂಲಕ್ಕಾಗಿ ಜಿಲ್ಲಾಡಳಿತ ಈ ಆದೇಶ ಹೊರಡಿಸಿದ್ದು, ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಈ ಆದೇಶ ಹೊರಡಿಸಿದ್ದಾರೆ.
Last Updated : Sep 15, 2019, 12:10 PM IST