ಚಿಕ್ಕಮಗಳೂರು:ಕೊರೊನಾ ಕಾಲದಲ್ಲಿ ಕಾಫಿನಾಡಿನಲ್ಲಿ ಅಧಿಕಾರಿಗಳು ಮೋಜು-ಮಸ್ತಿ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದೆ. ಪಾರ್ಟಿಗೆ ತೆರಳಲು ಹೊರಟಿದ್ದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ತಡೆಯೊಡ್ಡಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಸಂತವೇರಿ ಬಳಿ ನಡೆದಿದೆ.
ಚಿಕ್ಕಮಗಳೂರಿನಿಂದ ಹಿರಿಯ ಅಧಿಕಾರಿಗಳ ತಂಡ ಹತ್ತಕ್ಕೂ ಅಧಿಕ ಕಾರು, ಜೀಪ್ನಲ್ಲಿ ಹೊರಟಿದ್ದನ್ನು ನೋಡಿ, ಕಾರು-ಜೀಪುಗಳನ್ನು ತಡೆದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನಾ ವೇಳೆಯಲ್ಲಿ ನಿಮಗೆ ಮೋಜು-ಮಸ್ತಿ ಬೇಕಾ ಎಂದು ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಪ್ರಶ್ನೆ ಮಾಡುತ್ತಿದ್ದಾರೆ.