ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಉಲ್ಬಣಗೊಳ್ಳುತ್ತಿದ್ದು ಜನರ ನಿದ್ದೆಗೆಡಿಸಿದೆ. ಹೌದು, ನಿನ್ನೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ರವರು ಹೋಂ ಕ್ವಾರಂಟೈನ್ ಆದ ಬೆನ್ನಲ್ಲೇ, ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚಿಂದ್ರ ಕೂಡಾ ಹೋಂ ಕ್ವಾರಂಟೈನ್ ಆಗಿದ್ದಾರೆ.
4 ಸಿಬ್ಬಂದಿಗೆ ಸೋಂಕು ದೃಢ; ಚಿಕ್ಕಮಗಳೂರು ಎಸ್ಪಿ ಹೋಂ ಕ್ವಾರಂಟೈನ್ - Chickmagaluru latest news
ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 4 ಸಿಬ್ಬಂದಿಗೆ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚಿಂದ್ರ ಹೋಂ ಕ್ವಾರಂಟೈನ್ ಆಗಿದ್ದಾರೆ.
SP Akshay Machindra
ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 4 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ, ಅವರ ಜೊತೆ ಪ್ರಾಥಮಿಕ ಸಂಪರ್ಕವಿದ್ದ ಜಿಲ್ಲಾ ಎಸ್ಪಿ ಅವರಿಗೆ ಹೋಂ ಕ್ವಾರಂಟೈನ್ ಆಗಿರಲು ವೈದ್ಯರು ಸಲಹೆ ನೀಡಿದ್ದಾರೆ. ಎಸ್ಪಿ ಕಚೇರಿಯಲ್ಲಿ ನಾಲ್ಕು ಸಿಬ್ಬಂದಿಗೆ ಸೋಂಕು ತಗುಲಿರುವ ಕಾರಣ ಇಡೀ ಕಚೇರಿಯನ್ನು ಸ್ಯಾನಿಟೈಸರ್ ಮಾಡಲಾಗಿದೆ. ಈ ಹಿನ್ನೆಲೆ ಎಸ್ಪಿ ಅವರು ಮನೆಯಿಂದಲೇ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕಾಗಿದೆ.