ಚಿಕ್ಕಮಗಳೂರು:ಜಿಲ್ಲೆಯ ಶೃಂಗೇರಿ ಶಾರದಾ ಪೀಠಕ್ಕೆ ಚುನಾವಣಾ ಆಯುಕ್ತ ಅಶೋಕ್ ಲವಾಸ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ.
ಶೃಂಗೇರಿ ಶಾರದಾ ಪೀಠಕ್ಕೆ ಮುಖ್ಯ ಚುನಾವಣಾ ಆಯುಕ್ತ ಅಶೋಕ್ ಲವಾಸ ಭೇಟಿ - chickmagaluru mudigere latest news
ಶೃಂಗೇರಿ ಶಾರದಾ ಪೀಠಕ್ಕೆ ಮುಖ್ಯ ಚುನಾವಣಾ ಆಯುಕ್ತ ಅಶೋಕ್ ಲವಾಸ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ.
ಶೃಂಗೇರಿ ಶಾರದಾ ಮಠಕ್ಕೆ ಮುಖ್ಯ ಚುನಾವಣಾ ಆಯುಕ್ತ ಅಶೋಕ್ ಲವಾಸ ಭೇಟಿ
ಚುನಾವಣಾ ಆಯುಕ್ತ ಅಶೋಕ್ ಲವಾಸ ಶಾರದಾ ಪೀಠಕ್ಕೆ ಭೇಟಿ ನೀಡುತ್ತಿದಂತೆ ದೇವಸ್ಥಾನದ ಆಡಳಿತ ಮಂಡಳಿ ಸ್ವಾಗತ ಮಾಡಿತು. ಶೃಂಗೇರಿ ಶಾರದಾಂಬೆಗೆ ಅಶೋಕ್ ಲವಾಸ ವಿಶೇಷ ಪೂಜೆ ಸಲ್ಲಿಸಿದ್ದು, ಶಾರದಂಬೆ ದರ್ಶನದ ನಂತರ ಗುರು ನಿವಾಸಕ್ಕೆ ತೆರಳಿ ಉಭಯ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.
ಜಗದ್ಗುರು ಭಾರತೀ ತೀರ್ಥ ಸ್ವಾಮೀಜಿ ಹಾಗೂ ಕಿರಿಯ ಸ್ವಾಮೀಜಿ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಇನ್ನು ಕಿಗ್ಗಾದಲ್ಲಿರುವ ಋಷ್ಯ ಶೃಂಗೇಶ್ವರನ ದರ್ಶನವನ್ನು ಆಶೋಕ್ ಲಾವಸ ಪಡೆಯಲಿದ್ದಾರೆ. ಇಂದು ರಾತ್ರಿ ಶಾರದಾ ಪೀಠದಲ್ಲೇ ವಾಸ್ತವ್ಯ ಹೂಡಿ ನಾಳೆ ತೆರಳಲಿದ್ದಾರೆ.