ಚಿಕ್ಕಮಗಳೂರು: ಜಿಲ್ಲೆಯಲ್ಲಿಇಂದು 108 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9.578ಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರು: 108 ಜನರಲ್ಲಿ ಕೊರೊನಾ ಸೋಂಕು ಪತ್ತೆ: 99 ಜನರು ಗುಣಮುಖ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 108 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 99 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ.
ಇಂದು ಕೋವಿಡ್ -19 ಆಸ್ಪತ್ರೆಯಿಂದ 99 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದ, ಒಟ್ಟು 7.508 ಜನ ಸೋಂಕಿತರು ಗುಣಮುಖರಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನಲ್ಲಿ 54, ಕಡೂರು ತಾಲೂಕಿನಲ್ಲಿ 11, ಮೂಡಿಗೆರೆ ತಾಲೂಕಿನಲ್ಲಿ 05, ತರೀಕೆರೆ ತಾಲೂಕಿನಲ್ಲಿ 31, ಶೃಂಗೇರಿ ತಾಲೂಕಿನಲ್ಲಿ 07ಪ್ರಕರಣಗಳು ಪತ್ತೆಯಾಗಿವೆ.
ಈ ಸೋಂಕಿಗೆ ಒಬ್ಬರು ಬಲಿಯಾಗಿದ್ದು, ಸಾವಿನ ಸಂಖ್ಯೆ 125ಕ್ಕೆ ಏರಿಕೆಯಾಗಿದೆ. ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ, ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ, ಕಟ್ಟೆಚ್ಚರವಹಿಸಿದೆ. ಜಿಲ್ಲೆಯಲ್ಲಿ ಒಟ್ಟು 1.846 ಸಕ್ರಿಯ ಪ್ರಕರಣಗಳಿವೆ.