ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 227 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9.470ಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರು: 227 ಜನರಲ್ಲಿ ಕೊರೊನಾ ಸೋಂಕು ಪತ್ತೆ: 146 ಜನ ಗುಣಮುಖ - 227 people have Corona
ಚಿಕ್ಕಮಗಳೂರು ಜಿಲ್ಲೆಯಲ್ಲಿ 227 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು,ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 146 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಈ ದಿನ ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 146 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಒಟ್ಟು 7.362 ಜನ ಸೋಂಕಿತರು ಜಿಲ್ಲಾ ಕೋವೀಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣಮುಖರಾಗಿ ಬಿಡುಗಡೆಯಾದಂತೆ ಆಗಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ 118, ಕಡೂರು ತಾಲೂಕಿನಲ್ಲಿ 32, ಮೂಡಿಗೆರೆ ತಾಲೂಕಿನಲ್ಲಿ 09, ತರೀಕೆರೆ ತಾಲೂಕಿನಲ್ಲಿ 56, ಕೊಪ್ಪ ತಾಲೂಕಿನಲ್ಲಿ 06, ಎನ್ಆರ್ ಪುರ ತಾಲೂಕಿನಲ್ಲಿ 01, ಶೃಂಗೇರಿ ತಾಲೂಕಿನಲ್ಲಿ 05 ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.
ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 124ಕ್ಕೆ ಏರಿಕೆಯಾಗಿದೆ. ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ, ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9.470ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 1.838 ಸಕ್ರಿಯ ಪ್ರಕರಣಗಳಿವೆ.