ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಿನಲ್ಲಿ 68, ಮಂಗಳೂರಿನಲ್ಲಿ 137 ಮಂದಿಗೆ ಕೊರೊನಾ ದೃಢ

ಚಿಕ್ಕಮಗಳೂರಿನಲ್ಲಿ ಇಂದು 68 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ, 12.324 ಕ್ಕೆ ಏರಿಕೆಯಾಗಿದೆ. ಇನ್ನು ಮಂಗಳೂರಿನಲ್ಲಿ ಕೋವಿಡ್​ಗೆ ಮೂವರು ಬಲಿಯಾಗಿದ್ದು, ಸಾವಿನ ಸಂಖ್ಯೆ 676 ಕ್ಕೆ ಏರಿಕೆಯಾಗಿದೆ.

ಕೊರೊನಾ
ಕೊರೊನಾ

By

Published : Oct 30, 2020, 9:53 PM IST

ಚಿಕ್ಕಮಗಳೂರು/ಮಂಗಳೂರು: ಚಿಕ್ಕಮಗಳೂರಿನಲ್ಲಿ ಇಂದು 68 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ, 12.324 ಕ್ಕೆ ಏರಿಕೆಯಾಗಿದೆ. ಇನ್ನು ಮಂಗಳೂರಿನಲ್ಲಿ ಕೋವಿಡ್​ಗೆ ಮೂವರು ಬಲಿಯಾಗಿದ್ದು, ಸಾವಿನ ಸಂಖ್ಯೆ 676ಕ್ಕೆ ಏರಿಕೆಯಾಗಿದೆ.

ಚಿಕ್ಕಮಗಳೂರಿನಲ್ಲಿ ಇಂದು 77 ಜನರು ಗುಣಮುಖರಾದ ಮೂಲಕ ಈವರೆಗೂ 11,621 ಮಂದಿ ಕೊರೊನಾ ಮುಕ್ತರಾಗಿದ್ದಾರೆ. ಚಿಕ್ಕಮಗಳೂರು-27, ಕಡೂರು -14, ಮೂಡಿಗೆರೆ -05, ತರೀಕೆರೆ - 16, ಶೃಂಗೇರಿ - 04, ಕೊಪ್ಪದಲ್ಲಿ -2 ಪ್ರಕರಣಗಳು ಪತ್ತೆಯಾಗಿವೆ. ಇನ್ನೂ 90 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 136ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 137 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈವರೆಗೆ 30,147 ಮಂದಿಗೆ ಸೋಂಕು ದೃಢಪಟ್ಟಿದೆ. 198 ಮಂದಿ ಗುಣಮುಖರಾಗಿದ್ದು ಈವರೆಗೆ 27,641 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ. ಇನ್ನೂ 1,830 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 2,58,554 ಮಂದಿಯ ತಪಾಸಣೆ ನಡೆಸಲಾಗಿದ್ದು ಇದರಲ್ಲಿ 2,28,407 ನೆಗೆಟಿವ್ ಬಂದಿದೆ. ಈವರೆಗೆ 10,330 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು 11,48,237 ರೂ.ದಂಡ ವಸೂಲಿ ಮಾಡಲಾಗಿದೆ.

ABOUT THE AUTHOR

...view details