ಚಿಕ್ಕಮಗಳೂರು: ರಸ್ತೆ ಬದಿ ಹಾಕಿದ್ದ ಅಡಿಕೆ ಸಿಪ್ಪೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಗ್ರಾಮದ ತುಂಬಾ ಹೊಗೆ ಆವರಿಸಿರುವ ಘಟನೆ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದೆ.
ಅಡಿಕೆ ಸಿಪ್ಪೆಗೆ ಆಕಸ್ಮಿಕ ಬೆಂಕಿ: ಆತಂಕಕ್ಕೀಡಾದ ಬಾವಿಕೆರೆ ಗ್ರಾಮಸ್ಥರು - ತರೀಕೆರೆ ತಾಲೂಕಿನ ಬಹುತೇಕ ಭಾಗ ಅಡಿಕೆ ಉದ್ಯಮ
ತರೀಕೆರೆ ತಾಲೂಕಿನ ಬಹುತೇಕ ಭಾಗ ಅಡಿಕೆ ಉದ್ಯಮವನ್ನೇ ಆಶ್ರಯಿಸಿದೆ. ಈಗ ಅಡಿಕೆ ಕೊಯ್ಲಿನ ಸಮಯ ಮುಗಿದಿದೆ. ಸುಲಿದ ಅಡಿಕೆಯ ಸಿಪ್ಪೆಯನ್ನ ಒಣಗಲೆಂದು ಕೆಲವರು ರಸ್ತೆ ಬದಿ ಸುರಿಯುತ್ತಾರೆ. ಹೀಗೆ ಸುರಿದ ಅಡಿಕೆ ಸಿಪ್ಪೆಗೆ ಆಕಸ್ಮಿಕ ಬೆಂಕಿ ತಗುಲಿ ಈ ಅವಘಡ ಸಂಭವಿಸಿದೆ.
ಅಡಿಕೆ ಸಿಪ್ಪೆಗೆ ಆಕಸ್ಮಿಕ ಬೆಂಕಿ
ತರೀಕೆರೆ ತಾಲೂಕಿನ ಬಹುತೇಕ ಭಾಗ ಅಡಿಕೆ ಉದ್ಯಮವನ್ನೇ ಆಶ್ರಯಿಸಿದೆ. ಈಗ ಅಡಿಕೆ ಕೊಯ್ಲಿನ ಸಮಯ ಮುಗಿದಿದೆ. ಸುಲಿದ ಅಡಿಕೆಯ ಸಿಪ್ಪೆಯನ್ನ ಒಣಗಲೆಂದು ಕೆಲವರು ರಸ್ತೆ ಬದಿ ಸುರಿಯುತ್ತಾರೆ. ಹೀಗೆ ಸುರಿದ ಅಡಿಕೆ ಸಿಪ್ಪೆಗೆ ಆಕಸ್ಮಿಕ ಬೆಂಕಿ ತಗುಲಿ ಈ ಅವಘಡ ಸಂಭವಿಸಿದೆ.
ಅಡಿಕೆ ಸಿಪ್ಪೆ ಜೋರಾಗಿ ಹೊತ್ತಿ ಉರಿಯದಿದ್ದರೂ ಬಾವಿಕೆರೆ ಗ್ರಾಮದ ತುಂಬಾ ಹೊಗೆ ಆವರಿಸಿದೆ. ಇದರಿಂದ ಸ್ಥಳಿಯರು ಆತಂಕಕ್ಕೀಡಾಗಿದ್ದಾರೆ. ಗ್ರಾಮದಲ್ಲಿ ಅಕ್ಕಪಕ್ಕ ನಿಂತಿದ್ದವರೂ ಕಾಣದಂತೆ ಆಗಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಕೂಡ ಹರಸಾಹಸ ಪಟ್ಟಿದ್ದಾರೆ.