ಚಿಕ್ಕಮಗಳೂರು :ಉಡ ಬೇಟೆಯಾಡಿದ್ದ ಆರೋಪಿಯನ್ನು ಚಿಕ್ಕಮಗಳೂರಿನ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕಮಗಳೂರು: ಉಡ ಬೇಟೆಯಾಡಿದ್ದ ಆರೋಪಿ ಅಂದರ್ - ಚಿಕ್ಕಮಗಳೂರು ಅರಣ್ಯ ಇಲಾಖೆ ಅಧಿಕಾರಿಗಳು
ಕಡೂರು ವಲಯದ ಯಗಟಿಪುರ ಗ್ರಾಮದ ವ್ಯಾಪ್ತಿಯಲ್ಲಿ ಉಡ ಬೇಟೆಯಾಡಿದ್ದ ಆರೋಪಿಯನ್ನು ಚಿಕ್ಕಮಗಳೂರಿನ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಉಡ ಬೇಟೆ
ಚಿಕ್ಕಮಗಳೂರು ಜಿಲ್ಲೆಯ ಕಡೂರು ವಲಯದ ಯಗಟಿಪುರ ಗ್ರಾಮದ ವ್ಯಾಪ್ತಿಯಲ್ಲಿ ಉಡ ಬೇಟೆಯಾಡಿದ್ದ ಪರಮೇಶ್ವರನ್ ಎಂಬ ಯುವಕನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಬಂಧಿಸಿ, ಅಕ್ರಮವಾಗಿ ಬೇಟೆಯಾಡಿದ್ದ ಉಡವನ್ನು ಆರೋಪಿಯಿಂದ ವಶಪಡಿಸಿಕೊಂಡಿದ್ದಾರೆ.
ಆರೋಪಿ ವಿರುದ್ಧ ವನ್ಯಜೀವಿ ಕಾಯ್ದೆ 1972 ರನ್ವಯ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಕಡೂರು ಅರಣ್ಯ ವಲಯ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಿಸಿಕೊಳ್ಳಲಾಗಿದೆ.