ಚಿಕ್ಕಮಗಳೂರು : ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ದತ್ತ ಜಯಂತಿ ಕಾರ್ಯಕ್ರಮ ನಡೆಯಲಿದೆ. ಡಿಸೆಂಬರ್ 10 ರಿಂದ 12ರವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸುತ್ತಾರೆ.
ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಆಚರಣೆ... ಜಿಲ್ಲೆಯಾದ್ಯಂತ ಮದ್ಯ ನಿಷೇಧ - ಚಿಕ್ಕಮಗಳೂರಿನಲ್ಲಿ ಮದ್ಯ ನಿಶೇಧ
ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ದತ್ತ ಜಯಂತಿ ಕಾರ್ಯಕ್ರಮ ನಡೆಯಲಿದೆ.
ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಆಚರಣೆ
ಈ ಹಿನ್ನೆಲೆ, ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಡಿಸೆಂಬರ್ 9ರ ಮದ್ಯರಾತ್ರಿಯಿಂದ ಡಿಸೆಂಬರ್12 ಮದ್ಯರಾತ್ರಿ 12 ರವರೆಗೆ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ನೀಡಿದ್ದಾರೆ.
ಮದ್ಯ ಮಾರಾಟ ಮತ್ತು ಸಾಗಾಣಿಕೆ, ಶೇಖರಣೆ, ತಯಾರಿಕೆ, ಸರಬರಾಜು ಮಾಡುವುದನ್ನು ನಿಲ್ಲಿಸಲು ಆದೇಶ ನೀಡಿದ್ದಾರೆ.