ಚಿಕ್ಕಮಗಳೂರು: ಇತ್ತೀಚೆಗೆ ಕೊರೊನಾ ಸೋಂಕಿತರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ಕೆಲ ದಿನಗಳ ಕಾಲ ಹೋಂ ಕ್ವಾರಂಟೈನ್ನಲ್ಲಿದ್ದರು. ಈಗ ಎರಡನೇ ಬಾರಿಗೆ ಹೋಂ ಕ್ವಾರಂಟೈನ್ ಒಳಗಾಗುವಂತಾಗಿದೆ.
ಅಡುಗೆ ಭಟ್ಟನಿಗೆ ಕೊರೊನಾ ಸೋಂಕು: ಚಿಕ್ಕಮಗಳೂರು ಜಿಲ್ಲಾಧಿಕಾರಿ ಕ್ವಾರಂಟೈನ್ - ಚಿಕ್ಕಮಗಳೂರು ಜಿಲ್ಲಾಧಿಕಾರಿ ನಿವಾಸದ ಅಡುಗೆ ಭಟ್ಟನಿಗೆ ಕೊರೊನಾ
ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ನಿವಾಸದ ಅಡುಗೆ ಭಟ್ಟನಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಒಂದು ವಾರಗಳ ಕಾಲ ಹೋಂ ಕ್ವಾರಂಟೈನ್ ಆಗಿರಲು ವೈದ್ಯಾಧಿಕಾರಿಗಳು ಸಲಹೆ ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲಾಧಿಕಾರಿ
ಜಿಲ್ಲಾಧಿಕಾರಿಗಳ ನಿವಾಸದ ಅಡುಗೆ ಭಟ್ಟನಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ಜಿಲ್ಲಾಧಿಕಾರಿ ಒಂದು ವಾರಗಳ ಕಾಲ ಹೋಂ ಕ್ವಾರಂಟೈನ್ ಆಗಿರಲು ವೈದ್ಯಾಧಿಕಾರಿಗಳು ಸಲಹೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದು, ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ.
ಈ ನಡುವೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಓರ್ವನಿಗೆ ಕೋವಿಡ್ ದೃಢಪಟ್ಟಿದ್ದು, ಪ್ರಾಥಮಿಕ ಸಂಪರ್ಕದಲ್ಲಿದ್ದ 20ಕ್ಕೂ ಹೆಚ್ಚು ಜನರನ್ನು ಪರೀಕ್ಷೆ ಮಾಡಲಾಗಿದೆ. ಆದರೆ ಎಲ್ಲರ ವರದಿಯೂ ನೆಗೆಟಿವ್ ಬಂದಿದೆ.