ಚಿಕ್ಕಮಗಳೂರು:ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ, ಸರ್ಕಾರದ ವತಿಯಿಂದ ಪ್ರವಾಸಿಗರಿಗೆ ಕೋವಿಡ್ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಮುಂದಾಗಿದೆ.
ಪ್ರವಾಸಿಗರಿಗೆ ಕೋವಿಡ್ ಪರೀಕ್ಷೆ ನಡೆಸಲು ಮುಂದಾದ ಚಿಕ್ಕಮಗಳೂರು ಜಿಲ್ಲಾಡಳಿತ - ಚಿಕ್ಕಮಗಳೂರು ಕೋವಿಡ್ ಪರೀಕ್ಷೆ ನ್ಯೂಸ್
ಪ್ರವಾಸಿ ತಾಣಗಳಲ್ಲಿ ಸ್ಥಳೀಯ ಪ್ರವಾಸಿಗರಿಗೆ ಮೊಬೈಲ್ ಟೀಮ್ ಮೂಲಕ ಕೊರೊನಾ ಸೋಂಕು ಪತ್ತೆ ಪರೀಕ್ಷೆ ನಡೆಸುತ್ತಿದ್ದರೆ, ಹೊರ ರಾಜ್ಯ ಹಾಗೂ ಹೊರ ಜಿಲ್ಲೆಯ ಪ್ರವಾಸಿಗರಿಗೆ ರ‍್ಯಾಪಿಡ್ ಟೆಸ್ಟ್ ಮೂಲಕ ಪರೀಕ್ಷೆ ನಡೆಯುತ್ತಿದೆ.
ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬರುತ್ತಿರುವ ಕೆಲ ಪ್ರವಾಸಿಗರು ಪರೀಕ್ಷೆಗೆ ಒಳಪಡಲು ಹಿಂದೇಟು ಹಾಕಿ, ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿ ನಡೆಸುತ್ತಿದ್ದ ಘಟನೆಗಳೂ ನಡೆಯುತ್ತಿವೆ.
ಕೆಲ ಪ್ರವಾಸಿಗರು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದು ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದಾರೆ. ಪ್ರವಾಸಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಅವರನ್ನು ಪರೀಕ್ಷೆಗೆ ಒಳಪಡಿಸಿ ನಂತರ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ ಪ್ರದೇಶಗಳಿಗೆ ಕಳುಹಿಸಲಾಗುತ್ತಿದೆ. ಈ ಸ್ಥಳದಲ್ಲಿ ಪೊಲೀಸರನ್ನು ನೇಮಿಸಿ, ಪರೀಕ್ಷೆಗೆ ಒಳಪಡದ ಪ್ರವಾಸಿಗರನ್ನು ಪ್ರವಾಸಿ ತಾಣಗಳಿಗೆ ಕಳುಹಿಸಬಾರದೆಂದು ಸ್ಥಳೀಯರು ಆಗ್ರಹಿಸಿದ್ದಾರೆ.