ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಲ್ಲಿ ಕನ್ನಡ ರಾಜ್ಯೋತ್ಸವ ಸರಳ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ - Kanada Rajyostava

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಹೇಗೆ ಸ್ವಾತಂತ್ರ್ಯ ದಿನಾಚರಣೆಯಂತೆಯೇ ಸರಳವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಚಿಕ್ಕಮಗಳೂರು ಜಿಲ್ಲಾಡಳಿತ ನಿರ್ಧರಿಸಿದೆ.

Meeting
Meeting

By

Published : Oct 16, 2020, 3:40 PM IST

ಚಿಕ್ಕಮಗಳೂರು:ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಹೆಚ್ಚಿನ ಜನ ಸೇರದೆ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಹೇಳಿದ್ದಾರೆ.

ತಮ್ಮ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವಿಶ್ವದಾದ್ಯಂತ ಹರಡಿರುವ ಕೊರೊನಾ ಸೋಂಕಿನಿಂದಾಗಿ ಈ ಬಾರಿಯ ನ. 01 ರಂದು ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಸ್ವಾತಂತ್ರ್ಯೋತ್ಸವ ದಿನಾಚರಣೆಯಂತೆಯೇ ಸರಳವಾಗಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದು. ಪ್ರತಿವರ್ಷದಂತೆ ಈ ಬಾರಿ ನಗರದ ಯಾವುದೇ ಪ್ರದೇಶಗಳಲ್ಲಿ ಮೆರವಣಿಗೆ ನಡೆಸುವುದಿಲ್ಲ ಎಂದರು.

ಈ ಬಾರಿ ಪರೇಡ್‌ನಲ್ಲಿ ಭಾಗವಹಿಸಲು ಯಾವುದೇ ಶಾಲಾ ಕಾಲೇಜು ಮಕ್ಕಳಿಗೆ ಅವಕಾಶವಿರುವುದಿಲ್ಲ. ಬದಲಾಗಿ ಆ.15ರ ಸ್ವಾಂತ್ರೋತ್ಸವದಲ್ಲಿ ಭಾಗಿಯಾಗಿದ್ದ ಪರೇಡ್‌ಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಿದ್ದಾರೆ ಎಂದು ಹೇಳಿದರು.

ABOUT THE AUTHOR

...view details