ಚಿಕ್ಕಮಗಳೂರು: ನಗರ ಸೇರಿದಂತೆ ಮಲೆನಾಡು ಭಾಗದಲ್ಲಿ ಕಳೆದ ಒಂದು ಗಂಟೆಯಿಂದ ಮಳೆಯ ಅಬ್ಬರ ಜೋರಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.
ಕಾಫಿನಾಡಿನಲ್ಲಿ ಧಾರಾಕಾರ ಮಳೆ, ಜನ ಜೀವನ ಅಸ್ತವ್ಯಸ್ತ - chikkamagaluru leatest news
ಚಿಕ್ಕಮಗಳೂರು ನಗರ, ಮೂಡಿಗೆರೆ ತಾಲೂಕಿನ ಬಣಕಲ್, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಸುತ್ತಮುತ್ತ ಭಾರೀ ಮಳೆಯಾಗುತ್ತಿದ್ದು, ಕಳಸ, ಮೂಡಿಗೆರೆ ಕುದುರೆಮುಖ ವ್ಯಾಪ್ತಿಯಲ್ಲೂ ಕಳೆದ ಒಂದು ಗಂಟೆಯಿಂದ ಧಾರಕಾರ ಮಳೆ ಸುರಿಯುತ್ತಿದೆ.
ಕಾಫಿನಾಡಿನಲ್ಲಿ ಧಾರಾಕಾರ ಮಳೆ, ಜನ ಜೀವನ ಅಸ್ತವ್ಯಸ್ತ
ಚಿಕ್ಕಮಗಳೂರು ನಗರ, ಮೂಡಿಗೆರೆ ತಾಲೂಕಿನ ಬಣಕಲ್, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಸುತ್ತಮುತ್ತ ಭಾರೀ ಮಳೆಯಾಗುತ್ತಿದ್ದು, ಕಳಸ, ಮೂಡಿಗೆರೆ ಕುದುರೆಮುಖ ವ್ಯಾಪ್ತಿಯಲ್ಲೂ ಧಾರಕಾರ ಮಳೆ ಸುರಿಯುತ್ತಿದೆ. ನಿರಂತರ ಸುರಿಯುತ್ತಿರುವ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಹಲವಾರು ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕದಲ್ಲಿಯೂ ವ್ಯತ್ಯಯ ಕಂಡು ಬರುತ್ತಿದೆ. ಅಲ್ಲದೆ ರಸ್ತೆ ಸಂಚಾರದಲ್ಲಿ ಅಡಚಣೆ ಉಂಟಾಗುತ್ತಿದ್ದು, ಜಿಲ್ಲೆಯ ಬಯಲು ಸೀಮೆ ಭಾಗದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.