ಚಿಕ್ಕಮಗಳೂರು:ಕೊಪ್ಪ ತಾಲೂಕಿನಲ್ಲಿ ಕೇಳಿಬಂದಿದ್ದ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನೊಂದ ಯುವತಿಯು ಯುವಕ ಸೇರಿದಂತೆ ಮೂವರ ವಿರುದ್ಧ ಹರಿಹರಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
'ಕಳೆದ ಮೂರು ವರ್ಷಗಳಿಂದ ನನಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ. ತಂಪು ಪಾನೀಯದಲ್ಲಿ ಅಮಲು ಪದಾರ್ಥವನ್ನು ಬೆರೆಸಿ ಬಲವಂತವಾಗಿ ಕುಡಿಸಿ ನನ್ನ ಫೋಟೋ ಹಾಗೂ ವಿಡಿಯೋ ತೆಗೆದು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ತಾಳಿ ಕಟ್ಟುವ ರೀತಿಯಲ್ಲೂ ಫೋಟೋ ತೆಗೆದುಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ' ಎಂದು ದೂರಿದ್ದಾಳೆ.