ಕರ್ನಾಟಕ

karnataka

ETV Bharat / state

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರೋಪಿ ಬಂಧನ: ಮರಳು, ಪಿಕಪ್​ ವಾಹನ ವಶಕ್ಕೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ, ಕಳಸ ಸಮೀಪದ ಯಡಿಯೂರು ಗ್ರಾಮದಲ್ಲಿ ಅಕ್ರಮ ಮರಳು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿ ಮರಳು ಹಾಗೂ ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

By

Published : Sep 23, 2020, 5:05 PM IST

Chikkamagaluru: Man arrested for illegally transporting sand
ಅಕ್ರಮ ಮರಳು ಸಾಗಣೆಕೆ ಮಾಡುತ್ತಿದ್ದ ಆರೋಪಿ ಬಂಧನ: ಮರಳು, ಗಾಡಿ ವಶಕ್ಕೆ

ಚಿಕ್ಕಮಗಳೂರು:ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೂಡಿಗೆರೆ ತಾಲೂಕಿನ, ಕಳಸ ಸಮೀಪದ ಯಡಿಯೂರು ಗ್ರಾಮದಲ್ಲಿ ಅಕ್ರಮ ಮರಳು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿ ಮರಳು ಹಾಗೂ ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಯಡಿಯೂರಿನ ಭದ್ರಾ ನದಿಯ ಉಪ ನದಿಯಲ್ಲಿ ದಂಧೆಕೋರರು ಮರಳು ತೆಗೆಯುತ್ತಿದ್ದ ವೇಳೆ ಕಳಸ ಪೊಲೀಸರು ದಾಳಿ ಮಾಡಿ ಮರಳು ತುಂಬಿದ ವಾಹನ ವಶಕ್ಕೆ ಪಡೆದಿದ್ದಾರೆ. ಈ ವೇಳೆ ದರ್ಶನ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಜಯ್ ಗೌಡ ಎಂಬ ಮತ್ತೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಇಬ್ಬರು ಆರೋಪಿಗಳು ಹಲವು ತಿಂಗಳುಗಳಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದರು ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಕಳಸ ಪೊಲೀಸರು ದಾಳಿ ನಡೆಸಿದ್ದರು. ತಲೆ ಮರೆಸಿಕೊಂಡಿರುವ ವಿಜಯ್ ಗೌಡ ಎಂಬ ಆರೋಪಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಈ ಕುರಿತು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ABOUT THE AUTHOR

...view details