ಚಿಕ್ಕಮಗಳೂರು:ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ಸಿಲುಕಿದ್ದು, ಭಾರತಕ್ಕೆ ಕರೆಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ತಾಲೂಕಿನ ಅಲ್ದೂರಿನ ಪ್ರದ್ವಿನ್, ಕಡೂರಿನ ಅರುಣ್ ಎಂಬ ಯುವಕರು ಎಂಬಿಬಿಎಸ್ ವ್ಯಾಸಂಗಕ್ಕಾಗಿ ಉಕ್ರೇನ್ಗೆ ತೆರಳಿದ್ದಾರೆ. ಸದ್ಯ ವಿದ್ಯಾರ್ಥಿಗಳು ಬಂಕರ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ವಿದ್ಯಾರ್ಥಿಗಳ ಜೊತೆ ನಿರಂತರವಾಗಿ ಜಿಲ್ಲಾಡಳಿತ ಸಂಪರ್ಕದಲ್ಲಿದ್ದು, ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.