ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಿನಲ್ಲಿ ನಡುರಸ್ತೆಯಲ್ಲೇ ಯುವಕನ ಬರ್ಬರ ಕೊಲೆ! - chikkamagaluru

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

chikkamagaluru murder case
ಚಿಕ್ಕಮಗಳೂರಿನಲ್ಲಿ ನಡುರಸ್ತೆಯಲ್ಲೇ ಯುವಕನ ಬರ್ಬರ ಕೊಲೆ!

By

Published : Nov 3, 2021, 2:09 PM IST

Updated : Nov 3, 2021, 3:34 PM IST

ಚಿಕ್ಕಮಗಳೂರು:ಕಾಫಿನಾಡು ಚಿಕ್ಕಮಗಳೂರಿನ ಮತ್ತಾವರ ಗ್ರಾಮದಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆ ಬುಧವಾರ ಬೆಳ್ಳಂಬೆಳಗ್ಗೆ ನಡೆದಿದೆ.

ಪ್ರಕೃತ್(29) ಮೃತ ಯುವಕ. ಪ್ರಕೃತ್​ ಕಾಫಿತೋಟಕ್ಕೆ ಹೋಗಿ ಹಿಂದುರುಗಿ ಬರುವಾಗ ನಡು ರಸ್ತೆಯಲ್ಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಯುವಕನ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಎಸ್​ಪಿ ಅಕ್ಷಯ್, ಪೊಲೀಸ್​ ಸಿಬ್ಬಂದಿ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Last Updated : Nov 3, 2021, 3:34 PM IST

ABOUT THE AUTHOR

...view details