ಚಿಕ್ಕಮಗಳೂರು: ಕಳೆದ ಎರಡು ತಿಂಗಳ ಹಿಂದೆ ಕೇರಳದಲ್ಲಿ ಬಂಧನಕ್ಕೊಳಗಾಗಿದ್ದ ನಕ್ಸಲ್ ಸಾವಿತ್ರಿಯನ್ನು ಜಿಲ್ಲೆಯ ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿ ನಕ್ಸಲ್ ಸಾವಿತ್ರಿಯನ್ನ ಏಪ್ರಿಲ್ 8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ.
ನಕ್ಸಲ್ ಸಾವಿತ್ರಿ ಶೃಂಗೇರಿ ಕೋರ್ಟ್ಗೆ ಹಾಜರು.. ಏ.8ರವರೆಗೆ ಪೊಲೀಸ್ ಕಸ್ಟಡಿಗೆ
ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ ಸಾವಿತ್ರಿ ಇಂದು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಏಪ್ರಿಲ್ 8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ನಕ್ಸಲ್ ಸಾವಿತ್ರಿ ಶೃಂಗೇರಿ ನ್ಯಾಯಲಯಕ್ಕೆ ಹಾಜರು, ಪೊಲೀಸ್ ಕಸ್ಟಡಿ ವಶಕ್ಕೆ
2001ರಿಂದಲೂ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ ಸಾವಿತ್ರಿ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಳಸ ಸಮೀಪದವರು. ಅನೇಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ನಕ್ಸಲ್ ಸಾವಿತ್ರಿ ಮತ್ತು ಬಿ.ಜಿ. ಕೃಷ್ಣಮೂರ್ತಿಯನ್ನು ಕಳೆದ ಫೆಬ್ರವರಿಯಲ್ಲಿ ಕೇರಳ ಪೊಲೀಸರು ಬಂಧಿಸಿದ್ದರು. ಕಳೆದ ಫೆಬ್ರವರಿ 24ರಂದು ನ್ಯಾಯಾಲಯದ ವಿಚಾರಣೆ ಎದುರಿಸಿದ ಬಿ.ಜಿ. ಕೃಷ್ಣಮೂರ್ತಿ ಸದ್ಯ ನ್ಯಾಯಾಂಗ ಬಂಧನಲ್ಲಿದ್ದಾರೆ.
ಇದನ್ನೂ ಓದಿ:ಸರ್ಕಾರಿ ಶಾಲೆಯ ಅಡುಗೆ ಕೊಠಡಿಯಲ್ಲಿ ಗ್ಯಾಸ್ ಲೀಕ್ನಿಂದ ಅಗ್ನಿ ಅವಘಡ: ಅಡುಗೆ ಸಿಬ್ಬಂದಿ ಸಾವು