ಕರ್ನಾಟಕ

karnataka

ETV Bharat / state

ಜಿಲ್ಲಾಡಳಿತದಿಂದ ಮಹಾ ಯಡವಟ್ಟು: ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸರ್ಕಾರಿ ವೈದ್ಯನಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಡಳಿತ ತಿಳಿಸಿತ್ತು. ಇದರಿಂದ ಜಿಲ್ಲೆಯ ಜನತೆಯಲ್ಲಿ ಆತಂಕ ಮನೆಮಾಡಿತ್ತು. ಆದರೆ, ಎರಡು, ಮೂರು ದಿನಗಳ ನಂತರ ಮತ್ತೊಮ್ಮೆ ಆತನನ್ನು ತಪಾಸಣೆಗೆ ಒಳಪಡಿಸಿದಾಗ ಕೊರೊನಾ ಇಲ್ಲ ಎಂಬ ಸತ್ಯ ಬಯಲಾಗಿದೆ. ಹಾಗಾಗಿ ಜಿಲ್ಲಾಡಳಿತದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Chikkamagaluru people outrage against District administration
ಚಿಕ್ಕಮಗಳೂರು

By

Published : May 25, 2020, 4:58 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಈ ವೇಳೆ ಚಿಕ್ಕಮಗಳೂರು ಜಿಲ್ಲಾಡಳಿತ ಮಹಾ ಯಡವಟ್ಟು ಮಾಡಿಕೊಂಡಿದೆ.

ಚಿಕ್ಕಮಗಳೂರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ

ಸರ್ಕಾರಿ ವೈದ್ಯರೊಬ್ಬರಿಗೆ ರ್‍ಯಾಂಡಮ್ ಟೆಸ್ಟ್ ಮಾಡುವ ವೇಳೆ ಕೊರೊನಾ ಪಾಸಿಟಿವ್ ಎಂದು ಹೇಳಿ ಆತನಿಗೆ ಚಿಕಿತ್ಸೆ ನೀಡಲು ಪ್ರಾರಂಭ ಮಾಡಿತ್ತು. ಆದರೆ ಎರಡು ದಿನಗಳ ನಂತರ ಆತನಿಗೆ ಕೊರೊನಾ ನೆಗೆಟಿವ್ ಇದೆ ಎಂದು ಜಿಲ್ಲಾಡಳಿತ ಹೇಳಿದ ಕೂಡಲೆ ವೈದ್ಯನನ್ನು ಮನೆಗೆ ಕಳುಹಿಸಿ ಕೊಟ್ಟಿದೆ. ವೈದ್ಯನ ವಿಚಾರದಲ್ಲಿ ಜಿಲ್ಲಾಡಳಿತ ಕಣ್ಣಾ ಮುಚ್ಚಾಲೆ ಆಟ ಆಡಿರೋದಕ್ಕೆ ಚಿಕ್ಕಮಗಳೂರಿನ ಕೆಲ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸರ್ಕಾರಿ ವೈದ್ಯನಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಡಳಿತ ತಿಳಿಸಿತ್ತು. ಇದರಿಂದ ಜಿಲ್ಲೆಯ ಜನತೆಯಲ್ಲಿ ಆತಂಕ ಮನೆಮಾಡಿತ್ತು. ಆದರೆ, ಎರಡು - ಮೂರು ದಿನಗಳ ನಂತರ ಮತ್ತೊಮ್ಮೆ ಆತನನ್ನು ತಪಾಸಣೆಗೆ ಒಳಪಡಿಸಿದಾಗ ಸತ್ಯ ಬಯಲಾಗಿದೆ. ಇದು ಲ್ಯಾಬ್​ನಿಂದ ಆಗಿರುವಂತಹ ತಪ್ಪು ಎಂದು ಹೇಳಿ ಜಿಲ್ಲಾಡಳಿತ ಕೈ ತೊಳೆದುಕೊಂಡಿತ್ತು. ಇದರಿಂದ ಮಾನಸಿಕ ಯಾತನೆ ಅನುಭವಿಸಿದ ವೈದ್ಯನ ಬಗ್ಗೆ ಹಾಗೂ ಆತನ ಪರಿಸ್ಥಿತಿ ಬಗ್ಗೆ ಯಾರೂ ಯೋಚನೆ ಮಾಡಿಲ್ಲ ಎಂದು ತಪ್ಪು ಮಾಹಿತಿ ನೀಡಿದ ಜಿಲ್ಲಾಡಳಿತದ ವಿರುದ್ಧ ಕೆಲ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶೇಷ ಅಂದ್ರೆ ಮೂಡಿಗೆರೆ ತಾಲೂಕಿನಲ್ಲಿ ಈ ವೈದ್ಯ ತುಂಬಾ ಜನಪ್ರಿಯರಾಗಿದ್ದು, ನಿತ್ಯ ನೂರಾರು ಜನರಿಗೆ ಹಾಗೂ ತನ್ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಸಾವಿರಕ್ಕೂ ಅಧಿಕ ಮಂದಿ ಈತನ ಪ್ರಾಥಮಿಕ ಸಂಪರ್ಕದಲ್ಲಿದ್ದರು. ಇವರೆಲ್ಲರೂ ವೈದ್ಯನಿಗೆ ಕೊರೊನಾ ಬಂದಿದೆ ಎಂದು ತಿಳಿದು ಬೆಚ್ಚಿ ಬಿದ್ದಿದ್ದರು. ನಂತರ ನೆಗೆಟಿವ್ ಎಂದು ಜಿಲ್ಲಾಡಳಿತ ತಿಳಿಸಿದ ಮೇಲೆ ಎಲ್ಲರೂ ನಿಟ್ಟುಸಿರು ಬಿಡುವಂತಾಗಿದೆ.

ಇನ್ನು ಕ್ವಾರಂಟೈನ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜನರು ಸರಿಯಾದ ಮೂಲ ಸೌಕರ್ಯವಿಲ್ಲದೇ ಪರದಾಡುತ್ತಿದ್ದರು. ಆದರೆ ವೈದ್ಯನಿಗೆ ಕೊರೊನಾ ವೈರಸ್ ಇಲ್ಲ ಎಂಬ ವಿಚಾರ ತಿಳಿಯುತ್ತಿದ್ದಂತೆ ಎಲ್ಲ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಜಿಲ್ಲಾಡಳಿತ ತಮ್ಮ ತಮ್ಮ ಮನೆಗೆ ಕಳುಹಿಸಿ ಕೊಟ್ಟಿದೆ. ಜಿಲ್ಲಾಡಳಿತ ಮಾಡಿರುವ ಮಹಾ ಎಡವಟ್ಟನ್ನು ಇದೀಗ ಕೆಲ ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ವಿದೇಶದಲ್ಲಿರುವ ಕನ್ನಡಿಗರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ಆದರೆ, ಇಲ್ಲಿನ ಜನರ ಬಗ್ಗೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಒಟ್ಟಾರೆಯಾಗಿ ಮೂಡಿಗೆರೆಯ ವೈದ್ಯ ಸೇರಿದಂತೆ ತರೀಕೆರೆಯ ಗರ್ಭಿಣಿಗೆ ಕೊರೊನಾ ವೈರಸ್ ಇದೆ ಎಂದು ಜಿಲ್ಲಾಡಳಿತವೇ ಹೇಳಿದ್ದು, ಆದರೆ ಇವರಿಗೆ ವೈರಸ್ ಹೇಗೆ ಬಂದಿದೆ ಎಂಬುದನ್ನು ಇಲ್ಲಿಯವರೆಗೂ ಸ್ಪಷ್ಟನೆ ನೀಡಿಲ್ಲ. ವೈದ್ಯನ ಪ್ರಕರಣದಲ್ಲಿ ಮಹಾ ಎಡವಟ್ಟು ಮಾಡಿಕೊಂಡಿರುವ ಜಿಲ್ಲಾಡಳಿತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಗರ್ಭಿಣಿ ಪ್ರಕರಣದಲ್ಲಿ ಸಹ ಇದೇ ರೀತಿ ಏನಾದರೂ ಆಗಿರಬಹುದು ಎಂಬ ಪ್ರಶ್ನೆ ಕಾಡುತ್ತಿದೆ.

ABOUT THE AUTHOR

...view details