ಚಿಕ್ಕಮಗಳೂರು :ಲಾಕ್‍ಡೌನ್‍ನಿಂದಾಗಿ ಸಂಕಷ್ಟಕ್ಕೊಳಗಾಗಿರುವ ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿಗೆ ರಾಜ್ಯ ಸರ್ಕಾರ ಆರ್ಥಿಕ ಪ್ಯಾಕೇಜ್ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ಸದಸ್ಯರು ಶಾಸಕ ಬೆಳ್ಳಿ ಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದರು.
ಆರ್ಥಿಕ ಪ್ಯಾಕೇಜ್ ಘೋಷಣೆಗೆ ಕಾಫಿನಾಡಿನ ಖಾಸಗಿ ಶಾಲಾ ಶಿಕ್ಷಕರ ಆಗ್ರಹ
ಕಳೆದ 4 ತಿಂಗಳಿನಿಂದ ಸ್ಥಗಿತಗೊಂಡಿವೆ. ವಿದ್ಯಾರ್ಥಿಗಳ ಶುಲ್ಕ ಪಾವತಿಯಾಗದಿರುವುದು ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಯಡಿ ಆ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಶುಲ್ಕವನ್ನು ರಾಜ್ಯ ಸರ್ಕಾರ ಪಾವತಿಸದ ಹಿನ್ನೆಲೆಯಲ್ಲಿ ಶಾಲೆಗಳು ಆರ್ಥಿಕವಾಗಿ ಸಂಕಷ್ಟಕ್ಕೊಳಗಾಗಿದ್ದು, ಶಿಕ್ಷಕರು ಮತ್ತು ಸಿಬ್ಬಂದಿಗೆ ವೇತನ ನೀಡಲು ಪರದಾಡುತ್ತಿವೆ ಎಂದು ಅಳಲು ತೋಡಿಕೊಂಡರು..
ಖಾಸಗಿ ಅನುದಾನ ರಹಿತ ಶಾಲೆಗಳು ಕಳೆದ 4 ತಿಂಗಳಿನಿಂದ ಸ್ಥಗಿತಗೊಂಡಿವೆ. ವಿದ್ಯಾರ್ಥಿಗಳ ಶುಲ್ಕ ಪಾವತಿಯಾಗದಿರುವುದು ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಯಡಿ ಆ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಶುಲ್ಕವನ್ನು ರಾಜ್ಯ ಸರ್ಕಾರ ಪಾವತಿಸದ ಹಿನ್ನೆಲೆಯಲ್ಲಿ ಶಾಲೆಗಳು ಆರ್ಥಿಕವಾಗಿ ಸಂಕಷ್ಟಕ್ಕೊಳಗಾಗಿದ್ದು, ಶಿಕ್ಷಕರು ಮತ್ತು ಸಿಬ್ಬಂದಿಗೆ ವೇತನ ನೀಡಲು ಪರದಾಡುತ್ತಿವೆ ಎಂದು ಅಳಲು ತೋಡಿಕೊಂಡರು.
ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಕಡ್ಡಾಯ ಶಿಕ್ಷಣ ಕಾಯ್ದೆಯಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶುಲ್ಕವನ್ನು ತಕ್ಷಣ ಪಾವತಿಸಬೇಕು. ಖಾಸಗಿ ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ ಪುಸ್ತಕಗಳನ್ನು ವಿತರಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ 6ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸುವಂತೆ ಹಾಕುತ್ತಿರುವ ಒತ್ತಡಗಳನ್ನು ಮತ್ತು ಷರತ್ತುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.