ಚಿಕ್ಕಮಗಳೂರು: ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಗೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ನಿಖರ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗಬೇಕು. ತಪ್ಪಿದ್ದಲ್ಲಿ ಅಂತಹವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಎಚ್ಚರಿಕೆ ನೀಡಿದ್ದಾರೆ.
ಆದರೆ, ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಗೆ ಕೆಲವು ಇಲಾಖೆ ಅಧಿಕಾರಿಗಳು ಗೈರಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು ಮುಂದಿನ ಸಭೆಗಳಲ್ಲಿ ಅನಧಿಕೃತವಾಗಿ ಗೈರಾಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಳಪೆ ಗುಣಮಟ್ಟದ ಎಣ್ಣೆ
ಶಾಲೆಗಳಲ್ಲಿ ನೀಡುವ ಮಧ್ಯಾಹ್ನದ ಬಿಸಿಯೂಟಕ್ಕೆ ಉತ್ತಮ ಶುಚಿಯಾದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಬೇಕು. ಆದರೆ ಸಾಂಬಾರು ಮಾಡಲು ಉಪಯೋಗಿಸುವ ಎಣ್ಣೆ ಉಕ್ಕುವುದು ಕಂಡು ಬರುತ್ತಿದೆ ಇದರ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.