ಚಿಕ್ಕಮಗಳೂರು:ಜಿಲ್ಲೆಯ ಕಡೂರು ತಾಲೂಕಿನ ಕೆ. ದಾಸರಹಳ್ಳಿ ಗ್ರಾಮದ ಎಸ್ಎಸ್ಎಲ್ಸಿ ವಿದ್ಯಾರ್ಥಿಗೆ, ಇದೇ ತಿಂಗಳ 11 ರಂದು ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಇಂದು ವಿದ್ಯಾರ್ಥಿ ಗುಣಮುಖವಾದ ಹಿನ್ನೆಲೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ತಿಳಿಸಿದ್ದಾರೆ.
ಸೋಂಕು ಇರುವುದು ದೃಢವಾದ ನಂತರ ವಿದ್ಯಾರ್ಥಿಗೆ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಗುಣಮುಖ ಆಗಿರುವುದರಿಂದ ಇಂದು ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಹೇಳಿದ್ದಾರೆ.