ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು: ಸ್ಕಾರ್ಫ್-ಕೇಸರಿ‌ ಶಲ್ಯಕ್ಕಾಗಿ ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ - ಚಿಕ್ಕಮಗಳೂರು ವಿದ್ಯಾರ್ಥಿಗಳಲ್ಲಿ ಗಲಾಟೆ

ಸ್ಕಾರ್ಫ್ ಹಾಗೂ ಕೇಸರಿ ಶಲ್ಯಕ್ಕೆ ಸಂಬಂಧಿಸಿದಂತೆ ಕೊಪ್ಪ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.

Chikkamagaluru students fight
ಚಿಕ್ಕಮಗಳೂರು ವಿದ್ಯಾರ್ಥಿಗಳಲ್ಲಿ ಗಲಾಟೆ

By

Published : Jan 12, 2022, 3:08 PM IST

ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ಕಾರ್ಫ್ ಹಾಗೂ ಕೇಸರಿ‌ ಶಲ್ಯಕ್ಕೆ ಸಂಬಂಧಿಸಿದಂತೆ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಗಲಾಟೆ ನಡೆದಿದೆ.‌ ಈ ಗಲಾಟೆಯಲ್ಲಿ ಗಾಯಗೊಂಡ ಕೆಲವರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಮಂಗಳವಾರದಂದು ಸ್ಕಾರ್ಫ್ ಹಾಗೂ ಕೇಸರಿ ಶಲ್ಯಕ್ಕೆ ಸಂಬಂಧಿಸಿದಂತೆ ಕೊಪ್ಪ ಸರ್ಕಾರಿ ಪದವಿ ಕಾಲೇಜಿನಲ್ಲಿ ವಿವಾದ ಉಂಟಾಗಿತ್ತು. ಪದವಿ ಕಾಲೇಜಿನಲ್ಲಿ ಈ ವಿವಾದ ಅಂತ್ಯ ಕಾಣುತ್ತಿದ್ದಂತೆ ಪಿಯು ಕಾಲೇಜಿನಲ್ಲಿ‌‌ ಗಲಾಟೆ ಆರಂಭಗೊಂಡಿದೆ. ಈ ಸಂದರ್ಭದಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿಯೇ ಹೊಡೆದಾಡಿಕೊಂಡಿದ್ದಾರೆ.

ಇದನ್ನೂ ಓದಿ:ಚಿಕ್ಕಮಗಳೂರು: ಸರ್ಕಾರಿ ಪ್ರೌಢಶಾಲೆಯ ಓರ್ವ ಶಿಕ್ಷಕ, ಐವರು ವಿದ್ಯಾರ್ಥಿಗಳಿಗೆ ಕೊರೊನಾ ದೃಢ

ಕೊಪ್ಪ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details