ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ನಡುವೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಚಿಕ್ಕಮಗಳೂರು: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಿಗೆ ಕೊರೊನಾ - ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ಅಬ್ಬರ ಮುಂದುವರೆದಿದೆ. ಈಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಿಗೆ ಸೋಂಕು ತಗುಲಿ ಆತಂಕ ಸೃಷ್ಟಿಸಿದೆ.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಿಗೆ ವಕ್ಕರಿಸಿದ ಕೊರೊನಾ
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಿಗೆ ವಕ್ಕರಿಸಿದ ಕೊರೊನಾ
ಇದೇ ರೀತಿ ಸೋಂಕು ಹೆಚ್ಚಾದರೆ ಮುಂದೆ ಏನಪ್ಪ ಗತಿ ಎಂದು ಜನತೆ ಯೋಚನೆ ಮಾಡುವಂತಾಗಿದೆ. ಕಚೇರಿಯಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ನಗರದ ಹೊರ ವಲಯದ ಕಲ್ಯಾಣ ನಗರದ ಬಳಿಯ ಬೈಪಾಸ್ ರಸ್ತೆಯಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.
ಕಚೇರಿಯ ಮುಖ್ಯ ದ್ವಾರ ಹಾಗೂ ಕಚೇರಿಯ ಬಾಗಿಲಿಗೆ ಬೀಗ ಜಡಿಯಲಾಗಿದೆ. ಸಾರ್ವಜನಿಕರು ಈ ಭಾಗದಲ್ಲಿ ಸಂಚರಿಸಬಾದು ಎಂಬ ಸೂಚನೆ ನೀಡಲಾಗಿದೆ.