ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು ಜಿಪಂ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಅಮಾನತು - ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಅಮಾನತು

ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಅವರನ್ನು ಬಿಜೆಪಿ ಅಮಾನತು ಮಾಡಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆದೇಶ ಹೊರಡಿಸಿದ್ದಾರೆ.

chikkamagaluru-zp-president-suspended-from-bjp
ಬಿಜೆಪಿಯಿಂದ ಚಿಕ್ಕಮಗಳೂರು ಜಿಪಂ ಅಧ್ಯಕ್ಷೆ ಅಮಾನತು

By

Published : Nov 19, 2020, 1:17 AM IST

Updated : Nov 19, 2020, 4:40 AM IST

ಚಿಕ್ಕಮಗಳೂರು:ಪಕ್ಷದ ಆಂತರಿಕ ಒಪ್ಪಂದದಂತೆ ಅಧಿಕಾರದ ಅವಧಿ ಪೂರ್ಣಗೊಂಡರೂ ರಾಜೀನಾಮೆ ನೀಡದ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಅವರನ್ನು ಬಿಜೆಪಿ ಅಮಾನತು ಮಾಡಿದೆ.

ಸುಜಾತ ಕೃಷ್ಣಪ್ಪ ಅವರನ್ನು ಅಮಾನತು ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆದೇಶ ಹೊರಡಿಸಿದ್ದು, ಪಕ್ಷದ ತೀರ್ಮಾನವನ್ನು ಉಲ್ಲಂಘಿಸಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಇದರಿಂದ ಪಕ್ಷಕ್ಕೆ ಮುಜುಗರ ಉಂಟಾಗಿ ಪಕ್ಷದ ಘನತೆಗೆ ಧಕ್ಕೆಯುಂಟಾಗಿದೆ. ಈ ಬಗ್ಗೆ ಸುಜಾತ ಅವರು ಖುದ್ದು ಹಾಜರಾಗಿ ಸಮಜಾಯಿಷಿ ನೀಡಲು ಸೂಚಿಸಿದರೂ ಹಾಗೆ ಮಾಡಿಲ್ಲ ಎಂದು ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.

ಆದೇಶ

ಜಿಪಂ ಸದಸ್ಯರು ರಾಜೀನಾಮೆ ನೀಡಬೇಕೆಂದು ಸ್ವಪಕ್ಷೀಯರೇ ಸುಜಾತ ಕೃಷ್ಣಪ್ಪ ವಿರುದ್ಧ ತಿರುಗಿ ಬಿದ್ದಿದ್ದರು. ಕಳೆದ ಎರಡು ಜಿಲ್ಲಾ ಪಂಚಾಯತ್​ ಸಾಮಾನ್ಯ ಸಭೆಗಳಿಗೆ ಗೈರಾಗಿದ್ದ ಸದಸ್ಯರು ಜಿಲ್ಲಾ ಪಂಚಾಯತ್​​ನಲ್ಲಿ ನಡೆದ ಮೂರನೇ ಸಭೆಯಲ್ಲಿ ಭಾಗವಹಿಸಿ ಅಧ್ಯಕ್ಷ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಸಾಮಾನ್ಯ ಸಭೆ ವೇಳೆ ಸಭಾಂಗಣದ ಬಾವಿಗಿಳಿದು ಅಧ್ಯಕ್ಷರ ವಿರುದ್ಧ ಧಿಕ್ಕಾರ ಕೂಗಿ ಸಭೆಯಿಂದ ಹೊರ ನಡೆದಿದ್ದರು. ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ್ದ ಸುಜಾತ, ತಾವು ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದರು.

ಈ ಹಿಂದೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯಾಗಿದ್ದ ಚೈತ್ರ ಮಾಲತೇಶ್ ಅವರು ಕೂಡ ಇದೇ ರೀತಿ ರಾಜೀನಾಮೆ ಕೊಡುವುದಿಲ್ಲ ಎಂದು ಮೊಂಡುತನ ಪ್ರದರ್ಶಿಸಿದ್ದರು. ಆಗ ಅವರನ್ನು ಪಕ್ಷ ಉಚ್ಚಾಟನೆಯ ಮೂಲಕವೇ ಜಿಪಂ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿತ್ತು.

Last Updated : Nov 19, 2020, 4:40 AM IST

ABOUT THE AUTHOR

...view details