ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 109 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ, 6,925ಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರು: 643 ಸೋಂಕಿತರು ಗುಣಮುಖ... 3 ಜನ ಬಲಿ - 643 people cured from corona
ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 643 ಕೊರೊನಾ ಸೋಂಕಿತರು ಗುಣಮುಖರಾಗಿದ್ದು, 109 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಮೂವರು ಸಾವನ್ನಪ್ಪಿದ್ದಾರೆ.
ಈ ದಿನ 643 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 5,320 ಜನ ಸೋಂಕಿತರು ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾದಂತೆ ಆಗಿದೆ. ಈ ದಿನ ಸೋಂಕಿಗೆ 3 ಜನರು ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 106ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಮನೆಯನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,925ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 1,499 ಸಕ್ರಿಯ ಪ್ರಕರಣಗಳಿವೆ.