ಚಿಕ್ಕಮಗಳೂರು: ಬೈಕ್ಗಳಲ್ಲಿ ಅಕ್ರಮವಾಗಿ ಮದ್ಯ ಸಾಗಿಸುವ ವೇಳೆ ಪೊಲೀಸರು ದಾಳಿ ಮಾಡಿ 89,843 ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು: ಅಕ್ರಮವಾಗಿ ಸಾಗಿಸಲಾಗ್ತಿದ್ದ 89,843 ಮೌಲ್ಯದ ಮದ್ಯ ವಶ - ಮದ್ಯ ವಶ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಾಣಾವರದಿಂದ ಮಾಚಗೊಂಡನಹಳ್ಳಿ ಚೆಕ್ಪೋಸ್ಟ್ ಮೂಲಕ ಸಖರಾಯಪಟ್ಟಣದ ಕಡೆಗೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ 89,843 ಮೌಲ್ಯದ ಮದ್ಯವನ್ನು ಪೊಲೀಸರು ಸೀಜ್ ಮಾಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಾಣಾವರದಿಂದ ಮಾಚಗೊಂಡನಹಳ್ಳಿ ಚೆಕ್ಪೋಸ್ಟ್ ಮೂಲಕ ಸಖರಾಯಪಟ್ಟಣದ ಕಡೆಗೆ ಅಕ್ರಮವಾಗಿ ಮದ್ಯವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಸಖರಾಯಪಟ್ಟಣ ಪೊಲೀಸ್ ಸಿಬ್ಬಂದಿಗೆ ಸ್ಥಳೀಯರಿಂದ ಖಚಿತ ಮಾಹಿತಿ ಬಂದಿತ್ತು.
ಈ ಹಿನ್ನೆಲೆ ಮಾಚಗೊಂಡನಹಳ್ಳಿ ಚೆಕ್ಪೋಸ್ಟ್ ಬಳಿ ಪಿಎಸ್ಐ ಹಾಗೂ ಸಿಬ್ಬಂದಿ ವಾಹನಗಳನ್ನು ಪರಿಶೀಲಿಸಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ 10 ಜನ ಆರೋಪಿಗಳನ್ನು ಬಂಧಿಸಿ, 9 ದ್ವಿ ಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ, 2.180 ಪ್ಯಾಕೆಟ್ ರಾಜಾ ವಿಸ್ಕಿ, ಹಾಗೂ 376 ಹೈವೇ ಮದ್ಯ, ವಿಸ್ಕಿ ವಶಕ್ಕೆ ಪಡೆದಿದ್ದಾರೆ. ಒಟ್ಟು ರೂ. 89,843 ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳನ್ನು ಪ್ರಕರಣ ದಾಖಲಿಸಿಕೊಂಡಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.