ಚಿಕ್ಕಮಗಳೂರು:ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ನಿಟ್ಟಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿದ್ದು, ಪಕ್ಷಕ್ಕಾಗಿ ದುಡಿದವರು ಹಾಗೂ ವಿರೋಧ ಪಕ್ಷದಿಂದ ಬಂದವರನ್ನ ಗಮನದಲ್ಲಿಟ್ಟುಕೊಂಡು ನಿರ್ಣಯ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
ಪಕ್ಷಕ್ಕಾಗಿ ದುಡಿದವರನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳ ಆಯ್ಕೆ: ಸಚಿವ ಸಿ.ಟಿ.ರವಿ - Chikmagalur District incharg Minister CT Ravi
ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪಕ್ಷಕ್ಕಾಗಿ ದುಡಿದವರನ್ನು ಗಮನದಲ್ಲಿಟ್ಟುಕೊಂಡು ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
![ಪಕ್ಷಕ್ಕಾಗಿ ದುಡಿದವರನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳ ಆಯ್ಕೆ: ಸಚಿವ ಸಿ.ಟಿ.ರವಿ Chikmagalur District incharg Minister CT Ravi statement](https://etvbharatimages.akamaized.net/etvbharat/prod-images/768-512-7626321-thumbnail-3x2-nin.jpg)
ಪಕ್ಷಕ್ಕಾಗಿ ಹೋರಾಡಿದವರನ್ನ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿ ಆಯ್ಕೆ ಮಾಡಲಾಗುವುದು: ಸಚಿವ ಸಿ.ಟಿ.ರವಿ
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಹಳಬರು ಹಾಗೂ ಹೊಸಬರನ್ನ ಕಡೆಗಣಿಸುವಂತಿಲ್ಲ. ಇಬ್ಬರನ್ನೂ ಬ್ಯಾಲೆನ್ಸ್ ಮಾಡಿ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಬೇಕು. ನಾವು ರಾಜ್ಯಸಭೆಗೆ ಅಭ್ಯರ್ಥಿ ಆಯ್ಕೆ ಮಾಡಿ ಕಳುಹಿಸಿದ ನಂತರ ಇಡೀ ಸವಿತಾ ಸಮಾಜ ಸಂಭ್ರಮಪಟ್ಟಿದೆ. ಇದು ಕರ್ನಾಟಕ ಇತಿಹಾಸದಲ್ಲೇ ಮೊದಲು. ಸಣ್ಣ ಸಣ್ಣ ಸಮುದಾಯ ಹಾಗೂ ಪಕ್ಷಕ್ಕಾಗಿ ದುಡಿದವರನ್ನ ಗಮನದಲ್ಲಿಟ್ಟುಕೊಂಡು ನಿರ್ಣಯ ಕೈಗೊಳ್ಳಬೇಕು.
ಇದು ಸವಾಲಿನ ಕೆಲಸ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷರ ಜೊತೆ ಸಮಾಲೋಚನೆ ಮಾಡಬೇಕು. ನಂತರ ಕೇಂದ್ರದ ವರಿಷ್ಠರ ಜೊತೆ ಸಮಾಲೋಚನೆ ಮಾಡಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು.