ಚಿಕ್ಕಮಗಳೂರು:ರಾಜ್ಯದಲ್ಲೆಡೆ ಕೊರೊನಾ ಭೀತಿಯಿಂದ ಪ್ರತಿ ಜಿಲ್ಲಾಡಳಿತದ ವತಿಯಿಂದ ಗ್ರಾಮಾಂತರ ಗಡಿ ರಸ್ತೆಗಳನ್ನು ಬಂದ್ ಮಾಡಲು ಮುಂದಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯಿಂದ ಹಾಸನ ಜಿಲ್ಲೆ ಸಂಪರ್ಕಿಸುವ ರಸ್ತೆಗಳನ್ನು ಬಂದ್ ಮಾಡಲಾಗುತ್ತಿದೆ.
ಹಾಸನ ಜಿಲ್ಲೆ ಸಂಪರ್ಕಿಸುವ ಗಡಿಯಲ್ಲಿನ ಗ್ರಾಮಾಂತರ ರಸ್ತೆಗಳನ್ನು ಬಂದ್ ಮಾಡಿದ್ದು, ಜಿಲ್ಲಾಡಳಿತದ ವತಿಯಿಂದ ಜೆಸಿಬಿ ಮೂಲಕ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ರಸ್ತೆಗಳಿಗೆ ಅಡ್ಡಲಾಗಿ ಮಣ್ಣು ಸುರಿದು ಈ ಕ್ರಮ ತೆಗೆದುಕೊಳ್ಳುತ್ತಿದ್ದು, ಪೊಲೀಸ್ ಭದ್ರತೆಯಲ್ಲಿ ರಸ್ತೆಗೆ ಅಡ್ಡಲಾಗಿ ಮಣ್ಣು ಸುರಿದು ರಸ್ತೆ ಸಂಪೂರ್ಣ ಬಂದ್ ಮಾಡಲಾಗುತ್ತಿದೆ.