ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಸಮೀಪದ ಗುಲ್ಲನ ಪೇಟೆಯ ಸತ್ತಿಹಳ್ಳಿ ನಿರ್ಜನ ಪ್ರದೇಶದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತ ಜೋಡಿ ಚಿಕ್ಕಮಗಳೂರು ತಾಲೂಕಿನ, ಕಲ್ಲುಗುಡ್ಡೆ ಅಣೂರಿನ ದರ್ಶನ್ ಮತ್ತು ಹಾಸನ ಜಿಲ್ಲೆಯ ಹಾನಬಾಳು ಮೂಲದ ಪೂರ್ವಿಕಾ ಎಂದು ಗುರುತಿಸಲಾಗಿದೆ.
ಚಿಕ್ಕಮಗಳೂರಲ್ಲಿ ಪ್ರೇಮಿಗಳಿಬ್ಬರ ಆತ್ಮಹತ್ಯೆ.. ಕಾರಣ ನಿಗೂಢ
ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು: ಒಂದೇ ವೇಲ್ನಿಂದ ಪ್ರೇಮಿಗಳಿಬ್ಬರು ನೇಣಿಗೆ ಶರಣು
ಈ ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರೇಮಿಗಳ ಮೃತ ದೇಹವನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.
ಇದನ್ನೂ ಓದಿ:ಪತ್ನಿಯೊಂದಿಗೆ ಸೇರಿಕೊಂಡು ಮಂತ್ರವಾದಿ ಅಪ್ಪನನ್ನು ಕೊಂದ ಮಗ
Last Updated : Dec 21, 2022, 9:22 AM IST