ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ಅಬ್ಬರ ಮುಂದುವರೆದಿದೆ. ಮೂಡಿಗೆರೆ ತಾಲೂಕಿನ ಚಿನ್ನಿಗ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಓರ್ವ ಶಿಕ್ಷಕ ಮತ್ತು ಐವರು ವಿದ್ಯಾರ್ಥಿಗಳಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ.
ಸರ್ಕಾರಿ ಪ್ರೌಢ ಶಾಲೆಯ ಓರ್ವ ಶಿಕ್ಷಕ, 8ನೇ ತರಗತಿಯ ಇಬ್ಬರು, 10ನೇ ತರಗತಿಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ಈ ಹಿನ್ನೆಲೆ ಶಾಲೆಗೆ ಮೂರು ದಿನ ರಜೆಯನ್ನು ಬಿಇಒ ಘೋಷಣೆ ಮಾಡಿದ್ದಾರೆ.