ಕರ್ನಾಟಕ

karnataka

ETV Bharat / state

ನಿರಾಶ್ರಿತರ ಕೇಂದ್ರಗಳಿಗೆ ನ್ಯಾಯಾಧೀಶ ಭೇಟಿ, ಸೌಕರ್ಯಗಳ ಪರಿಶೀಲನೆ - ಸಿವಿಲ್ ನ್ಯಾಯಾಧೀಶ ಬಸವರಾಜ್ ಚೇಂಗಟಿ

ಲಾಕ್​ಡೌನ್ ಹಿನ್ನೆಲೆ ನಿರಾಶ್ರಿತ ಕೇಂದ್ರಗಳಲ್ಲಿ ಜಿಲ್ಲಾಡಳಿತ ಕಲ್ಪಿಸಿರುವ ಸೌಕರ್ಯಗಳನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಬಸವರಾಜ್ ಚೇಂಗಟಿ ಪರಿಶೀಲನೆ ನಡೆಸಿದರು.

civil judge basavaraja chengati
ಸಿವಿಲ್ ನ್ಯಾಯಾಧೀಶ

By

Published : Apr 25, 2020, 6:29 PM IST

ಚಿಕ್ಕಮಗಳೂರು: ಬಡವರು, ಕಾರ್ಮಿಕರು, ನಿರ್ಗತಿಕರು ಹಾಗೂ ಭಿಕ್ಷುಕರಿಗೆ ನಗರದ ವಿವಿಧ ಭಾಗದಲ್ಲಿರುವ ನಿರಾಶ್ರಿತ ಕೇಂದ್ರಗಳಲ್ಲಿ ಜಿಲ್ಲಾಡಳಿತ ಆಶ್ರಯ ಕಲ್ಪಿಸಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿ ಒದಗಿಸಲಾಗಿರುವ ಸೌಕರ್ಯಗಳ ತಪಾಸಣೆ ನಡೆಸಿದ್ರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಬಸವರಾಜ್ ಚೇಂಗಟಿ, ನಗರದಲ್ಲಿರುವ ಮೂರು ನಿರಾಶ್ರಿತ ಕೇಂದ್ರಗಳಿಗೆ ಭೇಟಿ ನೀಡಿದರು. ಈ ವೇಳೆ ಅವರು ಜಿಲ್ಲಾಡಳಿತದ ವತಿಯಿಂದ ನೀಡಲಾಗಿರುವ ಸೌಲಭ್ಯ ಮತ್ತು ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು. ಅಧಿಕಾರಿಗಳಿಂದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಇದಾದ ಬಳಿಕ ನಗರದ ಹೊರವಲಯದ ಹಿರೇಮಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ಕೊಟ್ಟು ಸುರಕ್ಷತಾ ಕ್ರಮಗಳನ್ನು ಪರಿಶೀಲನೆ ನಡೆಸಿದರು.

ABOUT THE AUTHOR

...view details