ಕರ್ನಾಟಕ

karnataka

ETV Bharat / state

ಆನೆ ನಡೆದಿದ್ದೇ ದಾರಿ: ಕಾಫಿತೋಟದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ - Chikkamagaluru ELEPHANTS ON COFFEE ESTATE

ಮೂಡಿಗೆರೆ ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ. ಕಾಫಿ ತೋಟದ ಮಧ್ಯೆ ರಾಜಾರೋಷವಾಗಿ ಓಡಾಡೋದನ್ನು ಗಮನಿಸಿದ ತೋಟದ ಮಾಲೀಕರು ಹಾಗೂ ಕಾರ್ಮಿಕರು ಬೆಚ್ಚಿ ಬಿದ್ದಿದ್ದಾರೆ.

ಮಲೆನಾಡಿನಲ್ಲಿ ಮತ್ತೆ ಪ್ರತ್ಯಕ್ಷವಾದ ಒಂಟಿ ಸಲಗ

By

Published : Oct 31, 2019, 5:00 PM IST

ಚಿಕ್ಕಮಗಳೂರು:ಮಲೆನಾಡು ಭಾಗದಲ್ಲಿ ಮತ್ತೆ ಕಾಡಾನೆಗಳು ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ಮೂಡಿಗೆರೆ ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು, ಕಾಫಿ ತೋಟದ ಮಧ್ಯೆ ಓಡಾಡೋದನ್ನು ನೋಡಿದ ತೋಟದ ಮಾಲೀಕರು ಹಾಗೂ ಕಾರ್ಮಿಕರಲ್ಲಿ ಭಯ ಉಂಟುಮಾಡಿದೆ.

ಮಲೆನಾಡಿನಲ್ಲಿ ಮತ್ತೆ ಪ್ರತ್ಯಕ್ಷವಾದ ಒಂಟಿ ಸಲಗ, ಜನರಲ್ಲಿ ಆತಂಕ

ಕಳೆದ ಮೂರು ದಿನಗಳ ಹಿಂದಷ್ಟೇ ಅರಣ್ಯ ಇಲಾಖೆ ಅಧಿಕಾರಿ ಚೇತನ್‌ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಾಗಿ ಅಧಿಕಾರಿ ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಮತ್ತೆ ಈ ಭಾಗದಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು ಜನರಲ್ಲಿ ಭೀತಿ ಹೆಚ್ಚಿಸಿದೆ.

ಹಾಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಶೀಘ್ರ ಆನೆಗಳನ್ನು ಕಾಡಿಗಟ್ಟುವ ಕೆಲಸ ಮಾಡಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

ABOUT THE AUTHOR

...view details