ಕರ್ನಾಟಕ

karnataka

ETV Bharat / state

ನೀರು ಹರಿಯುವ ಪ್ರದೇಶದಲ್ಲಿ ಕಾಮಗಾರಿ ಬೇಡ ಎಂದು ಗ್ರಾಮಸ್ಥರಿಂದ ಪ್ರತಿಭಟನೆ

ನೀರು ಹರಿಯುವ ಪ್ರದೇಶಗಳಲ್ಲಿ ಕಾಮಾಗಾರಿಗಳನ್ನು ನಡೆಸುವುದರಿಂದ ಮಳೆಗಾಲದಲ್ಲಿ ನೀರು ಹರಿಯಲು ಜಾಗವಿಲ್ಲದೆ ನದಿ ನೀರು ಗ್ರಾಮಕ್ಕೆ ನುಗ್ಗುತ್ತದೆ. ಆದ್ದರಿಂದ ನೀರು ಹರಿಯುವ ಪ್ರದೇಶಗಳಲ್ಲಿ ಯಾವುದೇ ಕಾಮಗಾರಿಗಳನ್ನು ನಡೆಸಬಾರದೆಂದು ಎಂದು ಚಿಕ್ಕಮಗಳೂರಿನಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಗ್ರಾಮಸ್ಥರ ಪ್ರತಿಭಟನೆ

By

Published : Aug 28, 2019, 10:09 PM IST

ಚಿಕ್ಕಮಗಳೂರು:ನೀರು ಹರಿಯುವ ಜಾಗದಲ್ಲಿ ಕಾಮಗಾರಿ ನಡೆಸಿದ್ದರಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿದ ಮಹಾಮಳೆಗೆ ನೀರು ಹರಿಯುವ ದಿಕ್ಕುಗಳೇ ಬದಲಾಗಿವೆ. ಆದ್ದರಿಂದ ನೀರು ಹರಿಯುವ ಪ್ರದೇಶಗಳಲ್ಲಿ ಕಾಮಗಾರಿ ನಡೆಸಬಾರದೆಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಮೂಡಿಗೆರೆ ತಾಲೂಕಿನ ಬಂಕೇನಹಳ್ಳಿ ಗ್ರಾಮದಲ್ಲಿ ಮಹಾಮಳೆ ನಾನಾ ಅವಾಂತರಗಳನ್ನು ಸೃಷ್ಟಿ ಮಾಡಿದ್ದು, ಸರಿಪಡಿಸುವ ಕೆಲಸ ನಡೆಯುತ್ತಿದೆ. ಆದರೆ ತಾಲೂಕು ಆಡಳಿತದಿಂದ ನಡೆಯುತ್ತಿರುವ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಇದರಿಂದ ನದಿಯ ದಿಕ್ಕೇ ಬದಲಾಗಿ ಹೋಗುತ್ತದೆ. ಮುಂದಿನ ದಿನಗಳಲ್ಲಿ ಮತ್ತೆ ನದಿ ತುಂಬಿ ಹರಿದು ಮನೆಗಳು ಜಲಾವೃತವಾಗುತ್ತವೆ. ಆದ್ದರಿಂದ ನೀರು ಹರಿಯುವ ಪ್ರದೇಶಗಳಲ್ಲಿ ಕಾಮಾಗಾರಿಗಳನ್ನು ನಡೆಸಬಾರದು ಎಂದು ಬಂಕೇನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ.

ಗ್ರಾಮಸ್ಥರ ಪ್ರತಿಭಟನೆ

ಪ್ರತಿಭಟನಾಕಾರರು ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದು, ಕೂಡಲೇ ಶಾಸಕರು ಹಾಗೂ ಗುತ್ತಿಗೆದಾರರು ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದಿದ್ದರು.

ABOUT THE AUTHOR

...view details