ಚಿಕ್ಕಮಗಳೂರು: ಜಿಲ್ಲೆಗೆ ಪ್ರವೇಶಿಸುವ ವಾಹನ ಸವಾರರು ಹಾಗೂ ವಾಹನಗಳನ್ನು ತೊಳೆದುಕೊಂಡು ಪ್ರವೇಶಿಸುವಂತೆ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸರು ಸೂಚಿಸಿದ್ದಾರೆ.
ಮಂಗಳೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಚಿಕ್ಕಮಗಳೂರು ಪೋಲಿಸರು ಈ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ದೇಹಗಳ ಮೂಲಕ ಅಷ್ಟೇ ಅಲ್ಲದೇ ವಾಹನಗಳ ಮೂಲಕರು ರೋಗ ಹರಡುವ ಸಾಧ್ಯತೆಗಳಿದ್ದು, ಕೊರೊನಾ ತಡೆಗೆ ಹೆಚ್ಚಿನ ನಿಗಾ ವಹಿಸಲಾಗಿದೆ.