ಬೆಂಗಳೂರು:ನಟ ಪುನೀತ್ ರಾಜ್ಕುಮಾರ್ ಅಗಲಿಕೆ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಾಳಿನ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳ ಪ್ರವಾಸ ಕಾರ್ಯಕ್ರಮವನ್ನು ಮುಂದೂಡಿರುತ್ತಾರೆ ಎಂದು ಸಿಎಂ ಕಚೇರಿ ಪ್ರಕಟಣೆ ಹೊರಡಿಸಿದೆ.
ಜಲ ಸಂಪನ್ಮೂಲ ಇಲಾಖೆ ಮತ್ತು ವಿಜೆಎನ್ಎಲ್ ವತಿಯಿಂದ ಆಯೋಜಿಸಿರುವ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ಚಿಕ್ಕಮಗಳೂರು ಮತ್ತು ಕಡೂರು ತಾಲೂಕುಗಳಲ್ಲಿನ ಹಾಗೂ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು ಸೇರಿದಂತೆ 197 ಕೆರೆಗಳಿಗೆ ಭದ್ರಾ ಜಲಾಶಯದಿಂದ ಏತ ನೀರಾವರಿ ಮೂಲಕ ನೀರು ತುಂಬಿಸುವ ಯೋಜನೆಯ ಮೊದಲನೇ ಹಂತದ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ನಾಳೆ ಸಿಎಂ ತೆರಳಬೇಕಿತ್ತು.