ಚಿಕ್ಕಮಗಳೂರು:ಡಿ.25 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಿಕ್ಕಮಗಳೂರು ನಗರಕ್ಕೆ ಆಗಮಿಸಲಿದ್ದಾರೆ. ಜಿಲ್ಲೆಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಡಿಸೆಂಬರ್ 25 ರಂದು ಚಿಕ್ಕಮಗಳೂರಿಗೆ ಆಗಮಿಸಲಿರುವ ಸಿಎಂ ಯಡಿಯೂರಪ್ಪ - Chikkmagalur
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಿನ್ನೆಲೆಯಲ್ಲಿ ಡಿ.25 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಿಕ್ಕಮಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸಿ ಕಛೇರಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ಚರ್ಚೆ ನಡೆಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಸಿಎಂ ಆಗಮನದ ಹಿನ್ನೆಲೆಯಲ್ಲಿ ಡಿಸಿ ಕಛೇರಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ಚರ್ಚೆ ನಡೆಸಿದ್ದಾರೆ. ಡಿ. 25 ರಂದು ಮಧ್ಯಾಹ್ನ 2.30 ಕ್ಕೆ ಹೆಲಿಕಾಪ್ಟರ್ ಮೂಲಕ ಸಿಎಂ ಬಂದಿಳಿಯುವರು.
ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಾದ ಮೆಡಿಕಲ್ ಕಾಲೇಜಿನ ಶಂಕುಸ್ಥಾಪನೆ, ಕುಡಿಯುವ ನೀರಿನ ಅಮೃತ್ ಯೋಜನೆ ಉದ್ಘಾಟನೆ, ಹಿರೇಮಗಳೂರು ರಸ್ತೆ ಅಗಲೀಕರಣ ಶಂಕುಸ್ಥಾಪನೆ, ನಗರಸಭೆಯಿಂದ ನಿರ್ಮಿಸಿರುವ ವಸತಿ ಸಮಚ್ಚಯ ಹಾಗೂ ವಾಜಪೇಯಿ ವಸತಿ ಬಡಾವಣೆ ಕಾಮಗಾರಿಗಳ ಉದ್ಘಾಟನೆ ನೆರವೇರಲಿದೆ.