ಕರ್ನಾಟಕ

karnataka

ETV Bharat / state

ಓಮಿನಿ, ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ: ಒಬ್ಬನ ಬಲಿ - ಅಪಘಾತ ಸುದ್ದಿ ಚಿಕ್ಕಮಗಳೂರು

ಓಮಿನಿ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಸ್ಕೂಟಿ ಸವಾರ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ.

accident
ಅಪಘಾತ

By

Published : Feb 25, 2020, 8:37 PM IST

ಚಿಕ್ಕಮಗಳೂರು: ಓಮಿನಿ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಓರ್ವ ಸವಾರ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಬೆಂಗಳೂರಿನಿಂದ ಹೊರನಾಡಿಗೆ ಪ್ರವಾಸ ಬಂದಿದ್ದವರ ವಾಹನಗಳು ಅಪಘಾತಕ್ಕೀಡಾಗಿ ಒಬ್ಬ ಮೃತಪಟ್ಟಿದ್ದಾನೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಳಗೂರು ಬಳಿ ಈ ದುರ್ಘಟನೆ ನಡೆದಿದೆ. ಬೆಂಗಳೂರಿನ ರಾಜಾಜಿ ನಗರದ ದಿವಾಕರ್ ಮೃತ ವ್ಯಕ್ತಿ ಆಗಿದ್ದು, ನೆಲಮಂಗಲದ ಧನರಾಜ್ ಎಂಬುವವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಧನರಾಜ್​ನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೊರನಾಡಿನಿಂದ ಬೆಂಗಳೂರಿನ ಕಡೆ ಹೋಗುವಾಗ ಈ ಅವಘಡ ಜರುಗಿದ್ದು, ಸ್ಕೂಟಿಯಲ್ಲಿ ಇವರಿಬ್ಬರು 370 ಕಿ.ಮೀ. ದೂರದ ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದರು. ಇನ್ನು ಬಾಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details