ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ನಗರದಲ್ಲಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಅನ್ಯಕೋಮಿನ ಬಾವುಟ ಹಾರಿಸಿದ ಹಿನ್ನೆಲೆ ಶೃಂಗೇರಿ ಮಠದಿಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಶಂಕರಾಚಾರ್ಯರ ಪುತ್ಥಳಿ ಮೇಲೆ ಅನ್ಯಕೋಮಿನ ಬಾವುಟ: ಶೃಂಗೇರಿ ಠಾಣೆಯಲ್ಲಿ ದೂರು - Shankaracharya statue
ಶೃಂಗೇರಿ ನಗರದಲ್ಲಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಅನ್ಯಕೋಮಿನ ಬಾವುಟ ಹಾರಿಸಿರುವುದು ಶ್ರೀಮಠದ ಗೌರವಕ್ಕೆ ಧಕ್ಕೆಯಾಗಿದೆ. ಕೃತ್ಯ ಎಸಗಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶೃಂಗೇರಿ ಮಠದ ವತಿಯಿಂದ ಶೃಂಗೇರಿ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.
ಶೃಂಗೇರಿ ಠಾಣೆಯಲ್ಲಿ ದೂರು
ಕೋಮು ಸಾಮರಸ್ಯ ಕದಡುವ ಪ್ರಯತ್ನ ಮಾಡಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಮನವಿ ಮಾಡಲಾಗಿದ್ದು, ಮಠದ ಆಡಳಿತಾಧಿಕಾರಿ ಗೌರಿಶಂಕರ್ ಶೃಂಗೇರಿ ಠಾಣೆಗೆ ದೂರು ಸಲ್ಲಿಸಿದ್ದಾರೆ.
ನಿನ್ನೆ ಬೆಳಗ್ಗೆ ಮಾಜಿ ಶಾಸಕ ಡಿ. ಎನ್ ಜೀವರಾಜ್ ಈ ಘಟನೆ ಖಂಡಿಸಿ ವಿರುದ್ಧ ಪ್ರತಿಭಟಸಿ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.