ಕರ್ನಾಟಕ

karnataka

ETV Bharat / state

ರಾಷ್ಟ್ರಧ್ವಜದ ಬಣ್ಣ ಕೇಸರಿ ಬದಲು ಕೆಂಪು ಎಂದ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು - ಸಿದ್ದರಾಮಯ್ಯ ವಿರುದ್ಧ ಚಿಕ್ಕಮಗಳೂರಿನ ಆಲ್ದೂರು ಪೊಲೀಸ್ ಠಾಣೆಯಲ್ಲಿ ದೂರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚಿಕ್ಕಮಗಳೂರಿನ ಆಲ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

complaint-filed-against-siddaramaiah
ಸಿದ್ದರಾಮಯ್ಯ ವಿರುದ್ಧ ದೂರು

By

Published : Aug 10, 2022, 10:56 PM IST

ಚಿಕ್ಕಮಗಳೂರು:ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಆಲ್ದೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಬಿಜೆಪಿ ಮುಖಂಡ ಗಿರೀಶ್ ಹಾಗೂ ಬಜರಂಗದಳದ ಶಿವಕುಮಾರ್ ನೇತೃತ್ವದಲ್ಲಿ ಆಲ್ದೂರು ಪೊಲೀಸ್ ಠಾಣೆಗೆ ತೆರಳಿದ ಪ್ರಮುಖರು ದೂರು ಸಲ್ಲಿಸಿದ್ದಾರೆ.

ಸಿದ್ದರಾಮಯ್ಯನವರು ಬಾವುಟದ ಬಣ್ಣಗಳು ಕೇಸರಿ, ಬಿಳಿ, ಹಸಿರು ಎನ್ನುವ ಬದಲು ಕೆಂಪು, ಬಿಳಿ, ಹಸಿರು ಎಂದು ಹೇಳುವ ಮೂಲಕ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಈ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಜೆಪಿ ಜಿಲ್ಲಾ ಮುಖಂಡರು ದೂರಿನಲ್ಲಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಸಿಎಂ ಬದಲಿಲ್ಲ, ನನ್ನ ರಾಜ್ಯಾಧ್ಯಕ್ಷ ಸ್ಥಾನದ ಅವಧಿಯೂ ಮುಗಿದಿಲ್ಲ ಎಂದ ಕಟೀಲ್

ABOUT THE AUTHOR

...view details